HomeLatest NewsBREAKING: ಕಾಲ್ತುಳಿತ ದುರಂತ: ಬೆಂಗಳೂರಿನ 2 ಮೆಟ್ರೋ ನಿಲ್ದಾಣಗಳು ದಿಢೀರ್ ಬಂದ್!

BREAKING: ಕಾಲ್ತುಳಿತ ದುರಂತ: ಬೆಂಗಳೂರಿನ 2 ಮೆಟ್ರೋ ನಿಲ್ದಾಣಗಳು ದಿಢೀರ್ ಬಂದ್!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಮುಂಜಾಗೃತಾ ಕ್ರಮವಾಗಿ ಬಿಎಂಆರ್ ಸಿ ಎಲ್ ಎರಡು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿದೆ.

ಆರ್ ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಹಾಗೂ ವಿಜಯೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧ ಮೆಟ್ರೋ ನಿಲ್ದಾಣ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಜನದಟ್ಟಣೆ ಹೆಚ್ಚಿದೆ. ಸಾಗರೋಪಾದಿಯಲ್ಲಿ ಪ್ರಯಾಣಿಕರು ಮೆಟ್ರೋ ನಿಲ್ದಾಣದತ್ತ ಹರಿದುಬಂದಿದೆ. ಇದೇ ಸಂದರ್ಭದಲ್ಲೇ ಅತ್ತ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳತ ದುರಂತ ಸಂಭಸಿದ್ದು, ಹತ್ತು ಜನರು ಸಾವನ್ನಪ್ಪಿದ್ದರು.

ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಬಿಎಂ ಆರ್ ಸಿಎಲ್ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಹಾಗೂ ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular