HomeLatest NewsBREAKING: ಬೆಂಗಳೂರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ

BREAKING: ಬೆಂಗಳೂರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಳಿಗ್ಗೆಯಿಂದ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಸಾಕಷ್ಟು ಬಾರಿ ಕರೆದಿದ್ದಾರೆ. ಆದರೆ ಮೇಲೆ ಎದ್ದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಪೊಲೀಸರು ಕಾರಿನ ಬಾಗಿಲು ತೆರೆದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಲಗಿದ್ದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೋ ಅಥವಾ ಕೊಲೆಯೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular