ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-ಜಾತಿಗಣತಿ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಜಿಬಿಎ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನಲ್ಲಿ ಅಕ್ಟೋಬರ್ 3ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ದಸರಾ ಹಬ್ಬ ಹಿನ್ನೆಲೆಯಲ್ಲಿ ಒಂದು ದಿನ ಸಮೀಕ್ಷೆ ಮುಂದೂಡಲಾಗಿದೆ. ಹಾಗಾಗಿ ಅಕ್ಟೋಬರ್ 4ರಿಂದ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.
ಸರ್ಕಾರದ ಸೂಚನೆ ಮೇರೆಗೆ ಇತರ ಇಲಾಖೆಗಳ ಸಹಕಾರ ಕೇಳಿದ್ದೇವೆ. ಅಕ್ಟೋಬರ್ 4ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದು ಹೇಳಿದರು.