HomeKarnatakaBREAKING: ಬೆಂಗಳೂರಿನಲ್ಲಿ ಅಗ್ನಿ ಅವಘಡ; 8 ಮನೆಗಳು ಸುಟ್ಟು ಭಸ್ಮ

BREAKING: ಬೆಂಗಳೂರಿನಲ್ಲಿ ಅಗ್ನಿ ಅವಘಡ; 8 ಮನೆಗಳು ಸುಟ್ಟು ಭಸ್ಮ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮನೆಗಳು ಸುಟ್ಟು ಭಸ್ಮವಾಗಿವೆ.

ಚಾಮರಾಜಪೇಟೆಯ ಆನಂದಪುರ ಬಳಿ ಬೆಂಕಿ ಅವಘಡ ಸಂಭವಿಸಿದ್ದು, 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಮೊದಲು ಗೋದಾಮಿಗೆ ತಗುಲಿದ ಬೆಂಕಿ ಬಳಿಕ ಸುತ್ತಮುತ್ತಲು ಇರುವ ಮನೆಗಳಿಗೆ ವ್ಯಾಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular