ನವದೆಹಲಿ: ಬೆಂಗಳೂರಿನ ಇಸ್ಕಾನ್ ಹರೇ ಕೃಷ್ಣ ದೇವಾಲಯದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ದೇವಾಲಯ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಬೆಂಗಳೂರಿನ ಇಸ್ಕಾನ್ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನದ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ದೇಗುಲದ ಒಡೆತನ ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ತೀರ್ಪು ನೀಡಿದೆ.
2023ರಲ್ಲಿ ಕರ್ನಾಟಕ ಹೈಕೋರ್ಟ್ ಬೆಂಗಳುರು ಇಸ್ಕಾನ್ ಅಧಿಕಾರವನ್ನು ಮುಂಬೈ ಅಧಿಕಾರಕ್ಕೆ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಇಸ್ಕಾನ್ ಸೊಸೈಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.