HomeLatest Newsಬೆಂಗಳೂರಿನ ಇಸ್ಕಾನ್ ದೇವಾಲಯದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರಿನ ಇಸ್ಕಾನ್ ದೇವಾಲಯದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೆಂಗಳೂರಿನ ಇಸ್ಕಾನ್ ಹರೇ ಕೃಷ್ಣ ದೇವಾಲಯದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ದೇವಾಲಯ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಬೆಂಗಳೂರಿನ ಇಸ್ಕಾನ್ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನದ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ದೇಗುಲದ ಒಡೆತನ ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ತೀರ್ಪು ನೀಡಿದೆ.

2023ರಲ್ಲಿ ಕರ್ನಾಟಕ ಹೈಕೋರ್ಟ್ ಬೆಂಗಳುರು ಇಸ್ಕಾನ್ ಅಧಿಕಾರವನ್ನು ಮುಂಬೈ ಅಧಿಕಾರಕ್ಕೆ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಇಸ್ಕಾನ್ ಸೊಸೈಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular