ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳುರು ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್ ಗಾಗಿ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳು, ಈವೆಂಟ್ ಸ್ಥಳಗಳು ಈಗಿನಿಂದಲೇ ಬುಕ್ ಆಗುತ್ತಿವೆ. ಮದ್ಯದ ಜೊತೆಗೆ ಡ್ರಗ್ಸ್ ಪಾರ್ಟಿಗಳಿಗೂ ಭರ್ಜರಿ ಪ್ಲಾನ್ ನಡೆಯುತ್ತಿರುತ್ತವೆ. ಹೊಸ ವರ್ಷಕ್ಕೆ ಪೊಲೀಸರು ಈಬಾರಿ 15 ದಿನಗಳ ಮುಂಚಿತವಾಗಿಯೇ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಹೊಸ ವರ್ಷಾಚರಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು,ಎಲ್ಲೆಡೆ ಭಾರಿ ಪರ್ಶೀಲನೆ ನಡೆಸುತ್ತಿದ್ದಾರೆ. ಅದರಲ್ಲಿಯೂ ವಾರಾಂತ್ಯದ ದಿನಗಳಲ್ಲಿ ತಪಾಸಣೆ ತೀವ್ರಗೊಂಡಿದೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಚನೆ ಬೆನ್ನಲ್ಲೇ ರಾತ್ರಿ ಎಲ್ಲಾ ವಿಭಾಗಗಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೋರಮಂಗಲದ 80ಫೀಟ್ ರೋಡ್, , ಇಂದಿರಾನಗರದ 100ಫೀಟ್ ರೋಡ್ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಪ್ರತಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ನಗರದ ಹಲವೆಡೆ ಡ್ರೋನ್ ಮೂಲಕ ಕಣ್ಗಾವಲು ಇದಲಾಗಿದೆ. ಡ್ರೋನ್ ಹಾರಾಟದ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲಾ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್, ಮಾಲ್ ಗಳಲ್ಲಿ ಖುದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾ ವ್ಯವಸ್ತೆ, ಭದ್ರತಾ ವ್ಯವಸ್ಥೆ, ಮುಂಜಾಗೃತಾ ಕ್ರಮ, ಅವಘಡಗಳು ನಡೆಯದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹೊಸ ವರ್ಷಕ್ಕೆ ಕಟ್ಟುನಿಟ್ಟಾಗಿ ನಿಯಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

