ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇರುತ್ತದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆ ಸುಗಮಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪೇ-ಆಂಡ್-ಪಾರ್ಕ್ ಯೋಜನೆಯನ್ನು ವಿಸ್ತರಿಸಲು ಮುಂದಾಗಿದೆ.
ಈಗಾಗಲೆ ಬೆಂಗಲುರು ಕೇಂದ್ರ ಭಾಗದಲ್ಲಿ 23 ರಸ್ತೆಗಳನ್ನು ಈ ಯೋಜನೆಯಡಿ ಕೇಂದ್ರ ನಗರ ನಿಗಮ ತಂದಿದೆ. ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸಲು ಟೆಂಡರ್ ಕರೆಯಲಾಗಿದೆ.
ಪೇ-ಆಂಡ್-ಪೇ ಯೋಜನೆಯಡಿ ಆಯ್ಕೆಯಾಗಿರುವ ರಸ್ತೆಗಳಲ್ಲಿ ಕಮರ್ಷಿಯಲ್ ಸ್ಟ್ರೀಟ್, ಕೇಂಬ್ರಿಡ್ಜ್ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸೆಲ್ ಸ್ಟ್ರೀಟ್, ಮಗ್ರತ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಸೇರಿದಂತೆ 23 ರಸ್ತೆಗಳು ಸೇರಿವೆ.
ಕೇಂದ್ರ ನಗರ ನಿಗಮ ಆರಂಭಿಸಿರುವ ಈ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಇತರ ನಿಗಮಗಳಿಗೂ ಅನುಸರಿಸಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ತಿಳಿಸಿದ್ದಾರೆ.

