HomeLatest NewsBREAKING: ಮರದ ಕೊಂಬೆ ಬಿದ್ದು ಯುವಕ ಸಾವು ಪ್ರಕರಣ: ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

BREAKING: ಮರದ ಕೊಂಬೆ ಬಿದ್ದು ಯುವಕ ಸಾವು ಪ್ರಕರಣ: ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೆಂಗಳೂರು: ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಸಾವಿನಲ್ಲೂ ನೋವಿನ ನಡುವೆ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ.

ಜೂನ್ 15ರಂದು ಬನಶಂಕರಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಷಯ್ ತಲೆಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ಕಳೆದುಕೊಂಡಿದ್ದ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಕ್ಷಯ್ ಕುಟುಂಬ, ಅಕ್ಷಯ್ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದೆ. ಅಕ್ಷಯ್ ನ ಎರಡೂ ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ನೀಡಲು ಮುಂದಾಗಿದೆ. ಈ ಮೂಲಕ ನೇತ್ರದಾನದ ಮೂಲಕ ಅಕ್ಷಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular