HomeLatest NewsBREAKING: ಮಹಿಳೆಯನ್ನು ಹತ್ಯೆಗೈದು ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್!

BREAKING: ಮಹಿಳೆಯನ್ನು ಹತ್ಯೆಗೈದು ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಬರ್ಬರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಲೆಗೈದ ದುಷ್ಕರ್ಮಿಗಳು ಶವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಸ್ಕೇಟಿಂಗ್ ಗ್ರೌಂಡ್ ಬಳಿ ಲಾರಿಯಲ್ಲಿ ಶವವಿಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ನಿನ್ನೆ ತಡರಾತ್ರಿ ಆಟೋದಲ್ಲಿ ಬಂದಿರುವ ದುಷ್ಕರ್ಮಿಗಳು ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಶವದ ಮೂಟೆ ಇಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರುಶೀಲನೆ ನಡೆಸಿದ್ದಾರೆ. 30-35 ವರ್ಷದ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular