BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಏರ್ ಪೋರ್ಟ್ ನಿರ್ಮಾಣಕ್ಕೆ ಸಜ್ಜಾದ ರಾಜ್ಯ ಸರ್ಕಾರ: ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಏರ್ ಪೋರ್ಟ್ ನ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮತನಾಡಿದ ಸಚಿವ ಎಂ.ಬಿ.ಪಾಟೀಲ್, ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಮಗೂ ಒಪ್ಪಂದವಿದೆ. ಅದರ ಪ್ರಕಾರ 2033ವರೆಗೆ ಬೇರೆ ಏರ್ ಪೋರ್ಟ್ ಗೆ ಅವಕಾಶವಿಲ್ಲ. 2033ರಲ್ಲಿ ನಾವು ಎರಡನೇ ಏರ್ ಪೋರ್ಟ್ ನಿರ್ಮಾಣ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಪ್ರಯಾಣಿಕರ ಲೋಡ್ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದೆ. 2032ರ ಸುಮಾರಿಗೆ ಕೆಐಎನಲ್ಲಿ ಜನಸಂದಣಿ ಹೆಚ್ಚಾಗಲಿದೆ. ಹಾಗಾಗಿ ಮತ್ತೊಂದು ಏರ್ ಪೋರ್ಟ್ ನಮಗೆ ಬೇಕಾಗುತ್ತದೆ. ಮುಂಬೈ, ಗೋವಾ, ದೆಹಲಿಯಲ್ಲಿ ಹೊಸ ಏರ್ ಪೊರ್ಟ್ ಗಳಿವೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ 2ನೇ ಏರ್ ಪೋರ್ಟ್ ಅಗತ್ಯವಿದೆ. ಎಲ್ಲಿ, ಎಷ್ಟು ಎಕರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read