ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 12 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಾಡಾಗ್ರಹಾರ ಗ್ರಾಮದ ಈ ಸರ್ಕಾರಿ ಜಮೀನಿನ ಮಾರ್ಗಸೂಚಿ ಮೌಲ್ಯ ಸುಮಾರು ₹18 ಕೋಟಿ ಹಾಗೂ ಮಾರುಕಟ್ಟೆ ಮೌಲ್ಯ ಸುಮಾರು ₹72 ಕೋಟಿ ಎಂದು ಅಂದಾಜಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 18 ಕೋಟಿ ಹಾಗೂ 72 ಕೋಟಿ (ಮಾರುಕಟ್ಟೆ ಮೌಲ್ಯದ) 12 ಎಕರೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ರವರ ನೇತೃತ್ವದಲ್ಲಿ ತೆರುವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ರವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಜಮೀನು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಾಡಾಗ್ರಹಾರ ಗ್ರಾಮದ ಸರ್ವೆ ನಂ 34 ರ ಹೊಸ ಸರ್ವೆ ನಂ 115 ಮತ್ತು 116 ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 12.00 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 18 (ಮಾರ್ಗಸೂಚಿ ಮೌಲ್ಯ) ಹಾಗೂ ರೂ 72 (ಮಾರುಕಟ್ಟೆ ಮೌಲ್ಯ ) ಕೋಟಿಗಳಾಗಿರುತ್ತದೆ.
ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ಸುಜಯ್, ಬೆಂಗಳೂರು ಪೂರ್ವ ತಾಲ್ಲೂಕಿನ ತಹಶೀಲ್ದಾರ್ ಪರಶುರಾಮ್ ಹಾಗೂ ಬೆಂಗಳೂರು ಪೂರ್ವ ತಾಲ್ಲೂಕಿನ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸರ್ಕಾರ ತಿಳಿಸಿದೆ.
ದೀಕ್ಷಾಭೂಮಿ ಯಾತ್ರೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ಡಾ. ಬಿ.ಆರ್. ಅಂಬೇಡ್ಕರ್ ರವರ ದೀಕ್ಷಾಭೂಮಿಯಲ್ಲಿ ನಡೆಯುವ ಪ್ರವರ್ತನಾ ದಿನ (ವಿಜಯದಶಮಿ ದಿನ) ಈ ಕಾರ್ಯಕ್ರಮಕ್ಕೆ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಭೇಟಿ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ .
ಆಸಕ್ತಿಯುಳ್ಳ ಅನುಯಾಯಿ ಯಾತ್ರಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆ.ಎಸ್.ಆರ್.ಟಿ.ಸಿ ಮತ್ತು ಇತರೆ ಸಾರಿಗೆ ಬಸ್ಸು ಮತ್ತು ರೈಲಿನ ಮೂಲಕ ಪ್ರಯಾಣಿಸಲು ಆನ್ ಲೈನ್ ಮೂಲಕ ವೆಬ್ ಸೈಟ್ : https://swd.karnataka.gov.in/ ರಲ್ಲಿ ಅಕ್ಟೋಬರ್ 09 2026ರ ರವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ , 33ನೇ ಕ್ರಾಸ್ ,ಜಯನಗರ 7 ನೇ ಬ್ಲಾಕ್ ,ಸಿಟಿ ಕಾಲೇಜು ಹತ್ತಿರ ,ಜಯನಗರ, ದೂರವಾಣಿ ಸಂಖ್ಯೆ್ 080-26711096 ಅಥವಾ ಇಮೇಲ್ – tswobloresouth@gmail. com ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

