ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೊಲೇರೋ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿ ಪಿಕಪ್ ವಾಹನದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಲೆರೋ ಚಾಲಕ ಹರೀಶ್ ಮತ್ತು ಕ್ಯಾಂಟರ್ ಚಾಲಕ ಮನ್ಸೂರ್ ಅವರಿಗೆ ಗಾಯಗಳಾಗಿದೆ ಇಬ್ಬರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕೆಟ್ಟು ನಿಂತಿದ್ದ ಬೊಲೆರೋ ವಾಹನವನ್ನು ಟೊಯಿಂಗ್ ಮಾಡಲಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ಗುದ್ದಿದೆ. ಡಿಕ್ಕಿ ರಭಸಕ್ಕೆ ಚಾಲಕ ಮನ್ಸೂರ್ ಕ್ಯಾಂಟರ್ ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಪೊಲೀಸರು ಕ್ರೇನ್ ಮೂಲಕ ಆತನನ್ನು ರಕ್ಷಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ 11:20ಕ್ಕೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಫ್ಲೈ ಓವರ್ ಮೇಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read