HomeIndiaಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ; ಪತ್ನಿಯನ್ನು ಅಟ್ಟಾಡಿಸಿ ಆಸಿಡ್ ಎರಚಿ ಮಚ್ಚಿನಿಂದ ಹಲ್ಲೆ ನಡೆಸಿದ...

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ; ಪತ್ನಿಯನ್ನು ಅಟ್ಟಾಡಿಸಿ ಆಸಿಡ್ ಎರಚಿ ಮಚ್ಚಿನಿಂದ ಹಲ್ಲೆ ನಡೆಸಿದ ಪಾಪಿ ಪತಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಪತಿಯೇ ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ನಡೆಸಿರುವ ಆತಂಕಕಾರಿ ಘಟನೆ ನಡೆದಿದೆ. ನಗರದ ಜೆಪಿ ನಗರದ ನಾರಾಯಣ ಕ್ಲಿನಿಕ್‌ ಬಳಿ ಈ ಕೃತ್ಯ ನಡೆದಿದ್ದು, ಘಟನೆಯ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹಲ್ಲೆಗೊಳಗಾದ ಮಹಿಳೆಯನ್ನು 26 ವರ್ಷದ ಮಧುಮಿತಾ ಎಂದು ಗುರುತಿಸಲಾಗಿದೆ. ಕೋಲ್ಕತ್ತಾ ಮೂಲದ ಮಧುಮಿತಾ, ಜೆಪಿ ನಗರದ ನಾರಾಯಣ ಕ್ಲಿನಿಕ್‌ನಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ತಿಂಡಿ ತಿನ್ನಲು ಹೊರಬಂದಿದ್ದ ವೇಳೆ ದಾಳಿ

ಮಧುಮಿತಾ ತಿಂಡಿ ತಿನ್ನಲು ಆಸ್ಪತ್ರೆಯಿಂದ ಹೊರಗೆ ಬಂದಿದ್ದ ವೇಳೆ ಆಕೆಯ ಪತಿ ವೆಂಕಟೇಶ್ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಆಸ್ಪತ್ರೆಯ ಪಾರ್ಕಿಂಗ್‌ ಲಾಟ್‌ನಲ್ಲಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯು ಮೊದಲು ಮಧುಮಿತಾ ಮೇಲೆ ಆಸಿಡ್ ಎರಚಿದ್ದು, ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಧುಮಿತಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜನರು ವಿಡಿಯೋ ಮಾಡುತ್ತಿದ್ದರು; ರಕ್ಷಣೆಗೆ ಮುಂದಾಗಲಿಲ್ಲ

ಘಟನೆ ನಡೆಯುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕೆಲವರು ತಮ್ಮ ಮೊಬೈಲ್‌ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಆದರೆ ಮಹಿಳೆಯ ಮೇಲೆ ಹಲ್ಲೆ ನಡೆಯುತ್ತಿದ್ದರೂ ಆಕೆಯ ರಕ್ಷಣೆಗೆ ಯಾರೂ ಮುಂದಾಗಲಿಲ್ಲ ಎನ್ನಲಾಗಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹಲ್ಲೆಗೆ ಕಾರಣವೇನು?

ಪತ್ನಿ ಮೇಲೆ ಪತಿ ವೆಂಕಟೇಶ್ ಯಾವ ಕಾರಣಕ್ಕೆ ಈ ರೀತಿಯ ದಾಳಿ ನಡೆಸಿದ್ದಾನೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಮಧುಮಿತಾಳನ್ನು ಅಟ್ಟಾಡಿಸಿಕೊಂಡು ಬಂದು ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ.

ಘಟನೆ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸೆಪ್ಟೆಂಬರ್ 20 ರವರೆಗೆ ‘ವಿಶ್ವ ರೋಗಿಗಳ ಸುರಕ್ಷತಾ ದಿನ’ ಜಾಗೃತಿ ಸಪ್ತಾಹ: ಆರೋಗ್ಯ ತಪಾಸಣೆಗೆ ಡಿಹೆಚ್‌ಒ ಕರೆ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಕಚೇರಿಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 20 ರವರೆಗೆ ಜಿಲ್ಲೆಯಾದ್ಯಂತ ‘ವಿಶ್ವ ರೋಗಿಗಳ ಸುರಕ್ಷತಾ ದಿನ’ದ ಅಂಗವಾಗಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಅಲಕನಂದ ಡಿ.ಮಾಳಗಿ ಅವರು ತಿಳಿಸಿದ್ದಾರೆ.

ಈ ವರ್ಷ ‘ಸಾಂಕ್ರಾಮಿಕವಲ್ಲದ ರೋಗಗಳಿಗೆ ಸುರಕ್ಷಿತ ಆರೈಕೆ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಉಪಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರಗಳು ನಡೆಯಲಿವೆ.

ದೀರ್ಘಕಾಲೀನ ಕಾಯಿಲೆಗಳಿಗೆ ನಿರಂತರ ಆರೈಕೆ: ಮಧುಮೇಹ, ಹೃದಯರೋಗ, ಕ್ಯಾನ್ಸರ್ ಮುಂತಾದ ದೀರ್ಘಕಾಲೀನ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸುರಕ್ಷಿತ, ನಿರಂತರ ಮತ್ತು ಸಮನ್ವಯಿತ ಆರೋಗ್ಯ ಸೇವೆ ಒದಗಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ.

ಚಿಕಿತ್ಸೆಯ ದೋಷಗಳಿಂದಾಗುವ ಹಾನಿ ತಡೆಗಟ್ಟುವುದು: ಆರೋಗ್ಯ ಸೇವೆಯ ಪ್ರತಿಯೊಂದು ಹಂತದಲ್ಲೂ ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಔಷಧಿ ಮತ್ತು ಚಿಕಿತ್ಸೆಯ ಲೋಪಗಳಿಂದ ಉಂಟಾಗಬಹುದಾದ ಹಾನಿಯನ್ನು ತಪ್ಪಿಸುವುದು. ರೋಗಿಗಳು ಮತ್ತು ಅವರ ಕುಟುಂಬಸ್ಥರನ್ನು ಚಿಕಿತ್ಸಾ ನಿರ್ಧಾರಗಳಲ್ಲಿ ಸಕ್ರಿಯವಾಗಿ ಒಳಗೊಳ್ಳುವಂತೆ ಮಾಡುವುದು. ಆರೋಗ್ಯ ಸಿಬ್ಬಂದಿ ಹಾಗೂ ರೋಗಿಗಳ ನಡುವೆ ಸ್ಪಷ್ಟ ಮತ್ತು ವಿಶ್ವಾಸಾರ್ಹ ಸಂವಹನ ಬೆಳೆಸುವುದಾಗಿದೆ.

ಕಾರ್ಯಕ್ರಮದ ಅಂಗವಾಗಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನದಲ್ಲಿ ಸಿಬ್ಬಂದಿಗಳಿಗೆ ಈ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಸಾರ್ವಜನಿಕರು ಈ ಅವಧಿಯಲ್ಲಿ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸುರಕ್ಷಿತವಾಗಿ ಬಾಳುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಮತ್ತು ಈ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಹೆಚ್‌ಒ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular