HomeKarnatakaBIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ 10 ಪ್ರಕರಣಗಳು ದಾಖಲಾಗಿವೆ.

ಕಳೆದ ಒಂದು ವಾರದಲ್ಲಿ ಬೆಂಗಳೂರು ಏರ್ ಪೋರ್ಟ್ ಗೆ 10 ಬಾರಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದುಷ್ಕರ್ಮಿಗಳು ಅಕ್ಟೋಬರ್ 22ರಿಂದ ಅ.26ರವರೆಗೆ ಹತ್ತು ಬಾರಿ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ.

ಎಕ್ಸ್ ಖಾತೆ, ಇ-ಮೇಲ್ ಮೂಲಕವಾಗಿ ಇಂಡಿಗೋ, ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದು, ಏರ್ ಪೋರ್ಟ್ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವನಹಳ್ಳಿ ಎಸಿಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

 

For Latest News Updates, Join Our Whatsapp Community🚩
RELATED ARTICLES

Most Popular