HomeKarnatakaBIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಸುಳ್ಳು ಹೇಳಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಮೇ 16ರಂದು ಭದ್ರತಾ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ವ್ಯಕ್ತಿ ಆತಂಕ ಸೃಷ್ಟಿಸಿದ್ದ. ಪ್ರಯಾಣಿಕ ರಾಜೇಶ್ ಕುಮಾರ್ ಬೆನಿವಾಲ್ ವಿರುದ್ಧ ವಿಮಾನಯಾನ ಸಂಸ್ಥೆ ಸಿಬ್ಬಂದಿ ದೂರು ನೀಡಿದ್ದರು. ಬ್ಯಾಗ್ ತಪಾಸಣೆ ನಡೆಸಿದಾಗ ಯಾವುದೇ ವಸ್ತುಗಳು ಇರಲಿಲ್ಲ. ಹುಸಿ ಬೆದರಿಕೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ರಾಜೇಶ್ ಕುಮಾರ್ ಬೆನಿವಾಲ್ ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular