HomeKarnatakaಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 28 ಕೋಟಿ ರೂ. ಹೈಡ್ರೋ ಗಾಂಜಾ ಹಾಗೂ 1.75...

ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 28 ಕೋಟಿ ರೂ. ಹೈಡ್ರೋ ಗಾಂಜಾ ಹಾಗೂ 1.75 ಕೋಟಿ ರೂ ಚಿನ್ನ ಜಪ್ತಿ

ದೇವನಹಳ್ಳಿ: ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 28 ಕೋಟಿ ರೂ. ಹೈಡ್ರೋ ಗಾಂಜಾ ಹಾಗೂ 1.75 ಕೋಟಿ ರೂ ಚಿನ್ನ ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್ ಮತ್ತು ವಿಯೆಟ್ನಾಂನಿಂದ ತಂದಿದ್ದ 28 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ 6 ಪ್ರಯಾಣಿಕರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ವಿಯೆಟ್ನಾಂ ಹಾಗೂ ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕರ ಬಗ್ಗೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಬ್ಯಾಗ್ ನಲ್ಲಿ ಅಡಗಿಸಿಟ್ತಿದ್ದ ಒಟ್ಟು 80.11 ಕೆಜಿ ತೂಕದ ಅತ್ಯಂತ ದುಬಾರಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ಇದರ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು 28 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕರು ಸೇರಿದಂತೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಐದು ಆರೋಪಿಗಳನ್ನು ಬಂಧಿಸಿದ್ದಾರೆ. ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದು ಕಾರ್ಯಾಚರಣೆಯಲ್ಲಿ, ಅಬುದಾಬಿ ಹಾಗೂ ಕೌಲಾಲಂಪುರದಿಂದ ಕೆಐಎಗೆ ಆಗಮಿಸಿದ್ದ ಪ್ರಯಾಣಿಕರಿಂದ 1.75 ಕೋಟಿ ರೂಪಾಯಿ ಮೌಲ್ಯದ 1.2 ಕೆಜಿ ಅಕ್ರಮ ಚಿನ್ನಾಭರಣಗಳನ್ನು ಸೀಜ್ ಮಾಡಲಾಗಿದೆ.

ಪ್ರಯಾಣಿಕರ ಬ್ಯಾಗ್ ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನಾಭರಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಪ್ರಯಾಣಿಕರನ್ನು ಬಂಧಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಸಚಿವ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು: ರಾಜೀನಾಮೆಗೆ ಆಗ್ರಹ

ಮೈಸೂರು: ವಾಯ್ಸ್ ಆಫ್ ಪೀಪಲ್ಸ್ ಸಂಸ್ಥೆ ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದೆ. ಅಲ್ಲದೇ ಸಚಿವರ ರಾಜೀನಾಮೆಗೆ ಆಗ್ರಹಿಸಿದೆ.

‘ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ’ ಎಂಬ ಹೇಳಿಕೆ ನೀಡಿದ್ದ ಸಚಿವ ಶಿವಲಿಂಗೇಗೌಡರು, ಅಧಿಕಾರಿಗಳಿಗೆ ಹಣ ನೀಡುವಂತೆ ಜನರಿಗೆ ನೇರವಾಗಿ ಸಲಹೆ ನೀಡುತ್ತಿದ್ದಾರೆ ಎಂದು ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ ರಾವ್ ಚೌಹಾಣ್ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಇಂತಹ ಹೇಳಿಕೆ ನೀಡಿರುವ ಶಿವಲಿಂಗೇಗೌಡರು ಸಚಿವ ಸ್ಥಾನದಲ್ಲಿರಲು ಅನರ್ಹರು. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸಾರ್ವಜನಿಕವಾಗಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ರಾಜ್ಯಪಾಲರಿಗೂ ದೂರು ಸಲ್ಲಿಸುವುದಾಗಿ ವಸಂತ ರಾವ್ ಚೌಹಾಣ್ ತಿಳಿಸಿದ್ದಾರೆ. ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸುವುದಾಗಿಯೂ ಹೇಳಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡರು, ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ. ಆದರೆ ಬಲವಂತವಾಗಿ ಹಣ ಕಿತ್ತುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಸಭೆಯಲ್ಲಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಸಂಬಳ ನೀಡುವುದಿಲ್ಲವೇ, ಹಣ ಏಕೆ ಕೊಡಬೇಕು ಎಂದು ಪ್ರಶ್ನಿಸಿದ್ದರು. ಬಳಿಕ ಸಚಿವ ಶಿವಲಿಂಗೇಗೌಡರು ತಾವು ಲಂಚ ನೀಡುವಂತೆ ಹೇಳಿಲ್ಲ, ಅಧಿಕಾರಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಮಾತ್ರ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದರು.

ಸಚಿವರ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಈ ಹೇಳಿಕೆ ವಿವಾದದ ಬೆನ್ನಲ್ಲೇ ಇದೀಗ ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular