HomeKarnatakaBIG NEWS: 2 ದಿನದಲ್ಲಿ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ ಬಹಿರಂಗ

BIG NEWS: 2 ದಿನದಲ್ಲಿ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ ಬಹಿರಂಗ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಯಲಿದ್ದು, ನಂತರ ಎಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಮತ್ತು ಏಕೆ ಎಂಬುದನ್ನು ಬಹಿರಂಗಪಡಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಭೆ ನಡೆಸಲಾಗಿದ್ದು, ಸ್ಥಳಗಳ ಕುರಿತಾಗಿಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಎರಡು ದಿನದ ನಂತರ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ ಎಲ್ಲ ಮಾಹಿತಿ ನೀಡಲಾಗುವುದು. ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗುತ್ತದೆ ಮತ್ತು ಏಕೆ ಎಂಬ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular