HomeKarnatakaBREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ 11 ಗಂಟೆ ಸುಮಾರಿಗೆ ಯಲಹಂಕ ಮೇಲ್ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಮೇಲ್ಸೇತುವೆ ಮೇಲೆ ಮೊದಲು ಕಾರ್ ಗೆ ಸಿಮೆಂಟ್ ಲಾರಿ ಡಿಕ್ಕಿ ಆಗಿದೆ. ಅಪಘಾತದ ವಿಚಾರವಾಗಿ ಬಲ ಭಾಗದಲ್ಲಿ ಕಾರ್ ಮತ್ತು ಲಾರಿ ಚಾಲಕನ ನಡುವೆ ಗಲಾಟೆ ನಡೆದಿದೆ. ಇದೇ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಇಬ್ಬರ ಗುರುತು ಪತ್ತೆಯಾಗಿಲ್ಲ. ಮೃತರ ಸಂಬಂಧಿಕರ ಸಂಪರ್ಕಕ್ಕೆ ಯಲಹಂಕ ಠಾಣೆ ಪೋಲೀಸರು ಪ್ರಯತ್ನ ನಡೆಸಿದ್ದಾರೆ. ಅಪಘಾತದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ನಲ್ಲಿ ಓರ್ವ ಪ್ರಯಾಣಿಕ ಇದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಿಎಂಟಿಸಿ ಬಸ್, ಕಾರ್, ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular