ಬೆಂಗಳೂರು: ಬೆಂಗಳೂರಿನ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಯುವತಿಗೆ ಪುಂಡರು ಕಾಟ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ರಾತ್ರಿ ಯುವತಿಯೊಬ್ಬಳು ತನ್ನ ಪಾಡಿಗೆ ತಾನು ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್ ನಲ್ಲಿ ಬಂದ ಮೂವರು ಯುವಕರ ಗುಂಪು ಯುವತಿಯನ್ನು ಫಾಲೋಮಾಡುತ್ತಾ ಕಿರುಕುಳ ನೀಡಿದ್ದಾರೆ. ಬರೋಬ್ಬರಿ 2 ಕಿ.ಮೀವರೆಗೆ ಫಾಲೋಮಾಡಿಕೊಂಡು ಹೋಗಿದ್ದಾರೆ. ಡಿಸೆಂಬರ್ 25ರಂದು ರಾತ್ರಿ ಈ ಘಟನೆ ನಡೆದಿತ್ತು.
ಬೈಕ್ ನ ಹಿಂದೆ ಬರುತ್ತಿದ್ದ ಕಾರಿನಲ್ಲಿದ್ದ ವ್ಯಕ್ತಿ ತನ್ನ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಹಿಡಿದು ಕಮಿಷನರ್ ಸೇರಿದಂತೆ ಬೆಂಗಳೂರು ಪೊಲೀಸರುಗೆ ಟ್ಯಾಗ್ ಮಾಡಿ ವಿಡಿಯೋ ಶೇರ್ ಮಾಡಿದ್ದರು. ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಘಟನೆ ಬೆನ್ನಲ್ಲೇ ಸುದ್ದಗುಂಟೆ ಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಯುವತಿಯನ್ನು ಫಾಲೋಮಾಡಿಕೊಂಡು ಹೋಗಿ ಕಾಟ ಕೊಟ್ಟಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೋಷನ್, ಆರ್ಯನ್,ಮತ್ತೋರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಿದ್ದಾರೆ.

