ಬೆಂಗಳೂರು ಬಂದ್ : ಇಂದು ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ| Bengaluru Bandh

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಹೋರಾಟ ತೀವ್ರವಾಗಿದ್ದು, ಮಂಗಳವಾರವಾದ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಪರಿಣಾಮ ನಗರದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಬಂದ್‌ ಘೋಷಿಸಿರುವ ಹಿನ್ನಲೆಯಲ್ಲಿ ಸರ್ಕಾರಿ/ ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ದಿನಾಂಕ:26-9-2023 ರಂದು ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕನ್ನಡಪರ ಹಾಗೂ ಇತರೇ ಸಂಘಟನೆಗಳು ಬಂದ್‌ ಘೋಷಿಸಿರುವ ಹಿನ್ನಲೆಯಲ್ಲಿ ಸರ್ಕಾರಿ/ಅನುದಾನಿತ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆಯಯನ್ನು ಘೋಷಿಸುವುದು. ಅನಿವಾರ್ಯವಾಗಿರುವುದರಿಂದ ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೆ.ಎ.ದಯಾನಂದ, ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ಆದ ನಾನು ದಿನಾಂಕ:21-9-2023 ರಂದು ನಡೆಯುವ ಬೆಂಗಳೂರು ಬಂದ್ ಪರಿಸ್ಥಿತಿಯನ್ನು ಅವಲೋಕಿಸಿ ಮುಜಾಂಗ್ರತೆ ಕ್ರಮಕ್ಕಾಗಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ/ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read