HomeLatest Newsಬಿಬಿಎಂಪಿ 5 ಭಾಗವಾಗಿ ವಿಭಜನೆ ವಿರೋಧಿಸಿ ಬೆಂಗಳೂರು ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

ಬಿಬಿಎಂಪಿ 5 ಭಾಗವಾಗಿ ವಿಭಜನೆ ವಿರೋಧಿಸಿ ಬೆಂಗಳೂರು ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರು ಮಹಾನಗರವನ್ನು ಐದು ಭಾಗಗಳಾಗಿ ವಿಭಜಿಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿಯನ್ನು ಜಿಬಿಎ ಕಾಯ್ದೆ ಅಡಿಯ 5 ಪಾಲಿಕೆಯಾಗಿ ವಿಭಜನೆ ಮಾಡುತ್ತಿರುವುದು ಕನ್ನಡಿಗರ ಅಸ್ತಿತ್ವಕ್ಕೆ ಮಾರಕವಾಗುತ್ತದೆ. ಬೆಂಗಳೂರನ್ನು ಐದು ಭಾಗ ಮಾಡುವುದರಿಂದ ಪರಭಾಷಿಕರ ಹಾವಳಿ ಹೆಚ್ಚಾಗುತ್ತದೆ. ಸರ್ಕಾರ ತಕ್ಷಣ ಈ ನಿರ್ಧಾರ ಹಿಂಪಡೆಯದಿದ್ದರೆ ಬೆಂಗಳೂರು ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ಮಹಾನಗರವನ್ನು ಐದು ಭಾಗ ಮಾಡುವುದರಿಂದ ಪ್ರತಿಷ್ಠೆಗೆ ಕುಂದಾಗುತ್ತದೆ. ಮಹಾನಗರವನ್ನು ತಾಲೂಕು ಮಟ್ಟಕ್ಕೆ ಇಳಿಸುವುದು ಸರಿಯಲ್ಲ, ಐದು ಮಹಾನಗರ ಪಾಲಿಕೆ ರಚನೆ ಮಾಡುವುದರ ಬದಲು ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ಸ್ಥಳೀಯ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಬೆಂಗಳೂರು ಮಹಾನಗರವನ್ನು ಐದು ಭಾಗಗಳಾಗಿ ವಿಭಜಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular