HomeKarnatakaಬೆಂಗಳೂರಿನಲ್ಲಿ ಬೈಕ್ ಕಳ್ಳತನ: 12 ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರಿನಲ್ಲಿ ಬೈಕ್ ಕಳ್ಳತನ: 12 ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು: ಪಾರ್ಕಿಂಗ್ ಮಾಡಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಂತರಾಜ್ಯ ಬೈಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಆರ್.ಟಿ.ನಗರ, ಸೋಲದೇವನಹಳ್ಳಿ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್ ಸಿಟಿ, ಬಾಣಸವಾಡಿ, ಕಾಡುಗೋಡಿ ಪೊಲೀಸರಿಂದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

ಬಂಧಿತರಿಂದ ಒಟ್ಟು 51 ಲಕ್ಷ ಮೌಲ್ಯದ 61 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರು ದೇವಸ್ಥಾನದ ಬಳಿ ನಿಲ್ಲಿಸಿದ್ದ, ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಹಾಗೂ ಜಾತ್ರೆಯಂತಹ ಸಂದರ್ಭಗಳಲ್ಲಿ ಬೈಕ್ ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular