BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ 6 ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನಾ ಸ್ಥಳದಲ್ಲಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚಾರಣೆಯಲ್ಲಿ ತೊಡಗಿದ್ದು, ಈವರೆಗೆ 6 ಕಾರ್ಮಿಕರ ಮೃತದೇಹ ಹೊರತೆಗೆದಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು, ಕಾರ್ಯಾಚಾರಣೆ ಮುಂದುವರೆದಿದೆ.

ಇನ್ನು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬಿಹಾರ ಮೂಲದ ಮೊಹಮ್ಮದ್ ಸಾಹಿಲ್, ತಿರುಪಾಲಿ, ಅರ್ಮಾನ್, ಶಂಕರ್, ಸತ್ಯರಾಜ್, ಸೋಲೋ ಪಾಸ್ವಾನ್ ಎಂದು ಗುರುತಿಸಲಾಗಿದೆ.

ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಿನವರೆಗೆ ಕಟ್ಟಡ ನಿರ್ಮಿಸಲು ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತನ್ನು ನಿರ್ಮಿಸಲಾಗಿದ್ದು, ಮಳೆಯ ಹೊಡೆತಕ್ಕೆ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ದುರಂತ ಸಂಭವಿಸಿದೆ.

ಪ್ರಕರಣ ಸಂಬಂಧ ಕಟ್ಟಡದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read