HomeKarnatakaBREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಗಳನ್ನು ಕಟ್ಟಲು ಮಾತ್ರ ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular