BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ.!

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು. ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ದುರಂತದಲ್ಲಿ ಒಟ್ಟು 13 ಜನರನ್ನು ರಕ್ಷಿಸಲಾಗಿದೆ.

ಇದೀಗ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಟ್ಟಡ ಕುಸಿತ ಹಾಗೂ ಕಾರ್ಯಾಚಾರಣೆ, ಕಾರ್ಮಿಕರ ಸಾವಿನ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಇನ್ನು ಕಟ್ಟಡ ಕುಸಿತ ಪ್ರಕರಣ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read