HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದ್ದು, ಮಣ್ಣಿನ ಅವಶೇಷಗಳ ಅಡಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವರನ್ನು ರಕ್ಷಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಹಾರದ ಸೋಂಪುರ ಮೂಲದ ರಂಜನ್ ಮೃತ ದುರ್ದೈವಿ. ಇನ್ನೋರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular