HomeKarnatakaರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಶೀಘ್ರ: ಸಾರಿಗೆ ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಶೀಘ್ರ: ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಳ ಬಿಸಿ ತಟ್ಟಲಿದೆ. ಶೀಘ್ರವೇ ಬಸ್ ಪ್ರಯಾಣದರ ಹೆಚ್ಚಳ ಬಗ್ಗೆ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಕಳೆದ ಎಂಟು ತಿಂಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಇಂಧನ ದರಗಳನ್ನು ಅನೇಕ ಬಾರಿ ಹೆಚ್ಚಳ ಮಾಡಿದೆ. ಹೀಗಿದ್ದರೂ ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರ ಪರಿಣಾಮ 4 ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಬಸ್ ಪ್ರಯಾಣ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದೆ. ಶೀಘ್ರವೇ ವರದಿಯನ್ನು ಸಮಿತಿಯು ಸರ್ಕಾರಕ್ಕೆ ಸಲ್ಲಿಸಲಿದೆ. ಈಗಿನ ಬರ ಪರಿಸ್ಥಿತಿಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿ ಅಲ್ಪ ಪ್ರಮಾಣದಲ್ಲಿ ಬಸ್ ಪ್ರಯಾಣದರ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.

ಸಾರಿಗೆ ನಿಗಮಗಳಿಗೆ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಶಕ್ತಿ ಯೋಜನೆಯಡಿ ರಾಜ್ಯದ 1 ಕೋಟಿಗೂ ಅಧಿಕ ಮಹಿಳೆಯರಿಗೆ ಮೊದಲ ಹಂತದಲ್ಲಿ ಉಚಿತ ಸ್ಮಾರ್ಟ್ ಕಾರ್ಡ್​ಗಳನ್ನು ವಿತರಿಸಲಿದ್ದು, ಇದಕ್ಕೆ 250 ಕೋಟಿ ರೂಪಾಯಿಗಳ ವೆಚ್ಚ ತಗುಲಲಿದೆ. ಸದ್ಯದಲ್ಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪಿಎಂ ಇ – ಡ್ರೈವ್ ಯೋಜನೆಯಡಿ 4,500 ಎಲೆಕ್ಟ್ರಿಕ್ ಬಸ್​ಗಳನ್ನು ಪಡೆಯಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ 600 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. 20 ವರ್ಷಕ್ಕೆ ಸುಮಾರು 12,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಈ ಯೋಜನೆಗೆ ಖರ್ಚು ಮಾಡಲಿದೆ. ಈ ಯೋಜನೆಯಡಿ 12 ಮೀಟರ್ ಉದ್ದದ 3,800 ಎಲೆಕ್ಟ್ರಿಕ್ ಬಸ್​​ಗಳು ಇರಲಿವೆ. 700 ಬಸ್​ಗಳು 9 ಮೀಟರ್ ಉದ್ದದ್ದಾಗಿರಲಿವೆ. 400 ಬಸ್​​ ಗಳು ಹವಾ ನಿಯಂತ್ರಿತವಾಗಿರುತ್ತವೆ ಎಂದು ಹೇಳಿದ್ದಾರೆ.

ವಾಹನ ತಯಾರಿಕಾ ಸಂಸ್ಥೆಗಳು ಹಂತ-ಹಂತವಾಗಿ ಇವಿ ಬಸ್​​ಗಳನ್ನು ತಯಾರಿಸಿ ಬಿಎಂಟಿಸಿಗೆ ಪೂರೈಕೆ ಮಾಡಲಿದ್ದು, ಬೆಂಗಳೂರು ನಾಗರಿಕರ ಸೇವೆಗೆ ಲಭ್ಯವಾಗಲಿವೆ. ಇವಿ ಬಸ್​​ಗಳ ಸಂಚಾರದಿಂದ ಬೆಂಗಳೂರು ನಗರದ ಪರಿಸರ ಮಾಲಿನ್ಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹೊಸ ಬಸ್ ಡಿಪೋ ನಿರ್ಮಾಣ ಮತ್ತು ಹಳೆಯ ಬಸ್ ನಿಲ್ದಾಣಗಳ ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದಿಂದ 2 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರಣಗಳು:

ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆ ಏರಿಕೆ ಕಾರಣದಿಂದಾಗಿ ಕರ್ನಾಟಕದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು.

ಡೀಸೆಲ್ ವೆಚ್ಚ: ಹಿಂದೆ KSRTC ಬಸ್ ಪ್ರಯಾಣ ದರ ಪರಿಷ್ಕರಣೆಯಾದಾಗ ಇದ್ದ ಡೀಸೆಲ್ ದರಕ್ಕೂ ಈಗಿನ ದರಕ್ಕೂ ಸಾಕಷಷ್ಟು ವ್ಯತ್ಯಾಸವಿದೆ. ಡೀಸೆಲ್ ದರ ಏರಿಕೆಯಿಂದಾಗಿ ಪ್ರತಿದಿನ ಹೆಚ್ಚುವರಿ ಹೊರೆ ಬೀಳುತ್ತದೆ. ಸಿಬ್ಬಂದಿ ವೇತನ, ವಾಹನದ ಬಿಡಿಭಾಗಗಳು, ಟೈರ್, ಟೋಲ್ ದರ, ಇನ್ಶುರೆನ್ಸ್ ವೆಚ್ಚ ಇತರೆ ಕಾರಣಗಳಿಂದ ನಾಲ್ಕೂ ನಿಗಮಗಳಿಗೆ ತಿಂಗಳಿಗೆ ಪ್ರತಿ ತಿಂಗಳು ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಸಾರಿಗೆ ನಿಗಮಗಳು(KSRTC, BMTC, NWKRTC, KKRTC) ನಷ್ಟದಲ್ಲಿವೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರೂ, ಡೀಸೆಲ್, ಬಿಡಿಭಾಗ ಮತ್ತು ವೇತನದ ಹೊರೆ ಸರಿದೂಗಿಸಲು ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular