Video | ರಾಜ್ಯ ರಾಜಧಾನಿ ಬೆಂಗಳೂರಿನ ‘ಸಂಚಾರ ದಟ್ಟಣೆ’ ಗೆ ಇಲ್ಲಿದೆ ಮತ್ತೊಂದು ಉದಾಹರಣೆ

ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ದು, ವಾಹನಗಳ ಸಂಖ್ಯೆಯೂ ಏರಿಕೆಯಾಗಿರುವ ಪರಿಣಾಮ ಸಂಚಾರ ದಟ್ಟಣೆ ಸರ್ವೇಸಾಮಾನ್ಯವಾಗಿದೆ. ಅದರಲ್ಲೂ ಮಳೆ ಬಂದರಂತೂ ಟ್ರಾಫಿಕ್ ನಲ್ಲಿ ಸಿಲುಕಿಕೊಂಡವರು ಮನೆ ಸೇರುವುದು ಮಧ್ಯರಾತ್ರಿಯಾಗುತ್ತದೆ. ಬೆಂಗಳೂರಿನ ಸಂಚಾರ ದಟ್ಟಣೆ ತೋರಿಸುವ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದೀಗ ಇದಕ್ಕೆ ಮತ್ತೊಂದು ಉದಾಹರಣೆ ಸೇರ್ಪಡೆಯಾಗಿದೆ.

ಬುಧವಾರದಂದು ಔಟರ್ ರಿಂಗ್ ರೋಡ್ ನಲ್ಲಿ ಟ್ರಾಫಿಕ್ ಜಾಮ್ ಆದ ಕಾರಣ ಇದರಲ್ಲಿ ಸಿಲುಕಿಕೊಂಡವರು ಗಂಟೆಗಟ್ಟಲೆ ಕಾಯುವಂತಾಗಿತ್ತು. ಈ ಸಂದರ್ಭವನ್ನು ಸದುಪಯೋಗಿಸಿಕೊಂಡ ಕ್ಯಾಬ್ ಚಾಲಕರೊಬ್ಬರು ವಾಹನದಲ್ಲಿಯೇ ಕುಳಿತು ಊಟ ಮಾಡಿದ್ದಾರೆ. ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನ ಸಿಟಿಜನ್ ಮೊಮೆಂಟ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಸಮಸ್ಯೆಯಿಂದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಅಧಿಕಾರಕ್ಕೆ ತೊಂದರೆಯಾಗುವುದಿಲ್ಲ ಎಂದು ವ್ಯಂಗ್ಯವಾಡಲಾಗಿದೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಲೇ ಹಲವು ಬಳಕೆದಾರರು ತಮ್ಮ ತಮ್ಮ ಅನುಭವವನ್ನು ಬರೆದುಕೊಂಡಿದ್ದು, ಈ ಸಮಸ್ಯೆಯಿಂದ ಪಾರಾಗಬೇಕೆಂದರೆ ದೊಡ್ಡ ದೊಡ್ಡ ಅಪಾರ್ಟ್ಮೆಂಟ್ ಕಟ್ಟುವುದನ್ನು ಸ್ಥಗಿತಗೊಳಿಸಬೇಕು ಹಾಗೂ ಐಟಿ ಹಬ್ ಗಳನ್ನು ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಿಗೆ ವಿಸ್ತರಿಸಬೇಕು ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬರು ಈ ವಿಡಿಯೋಗೆ ಪ್ರತಿಕ್ರಿಯಿಸಿ ಸಂಚಾರ ದಟ್ಟಣೆ ಮಾತ್ರವಲ್ಲ, ರಸ್ತೆ ಮೇಲಿನ ಗುಂಡಿಗಳು ಸಹ ವಾಹನ ಸವಾರರಿಗೆ ದುಸ್ವಪ್ನವಾಗಿವೆ. ಸೊಂಟ ಮುರಿದುಕೊಳ್ಳದೆ ಸುರಕ್ಷಿತವಾಗಿ ಮನೆ ಸೇರಿಕೊಂಡರೆ ಸಾಕು ಎಂಬಂತಾಗಿದೆ ಎಂದಿದ್ದಾರೆ.

https://twitter.com/east_bengaluru/status/1811093399262613925?ref_src=twsrc%5Etfw%7Ctwcamp%5Etweetembed%7Ctwterm%5E1811093399262613925%7Ctwgr%5E18b56391ecddfb8a8367cacb338c667f60f

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read