HomeKarnatakaBREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈಓವರ್ ಮೇಲೆ ಕಾರ್ ಪಲ್ಟಿಯಾಗಿ ನಾಲ್ವರಿಗೆ ಗಾಯ

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈಓವರ್ ಮೇಲೆ ಕಾರ್ ಪಲ್ಟಿಯಾಗಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ಮೇಲೆ ಕ್ರೆಟಾ ಕಾರ್ ಪಲ್ಟಿಯಾಗಿದೆ. ಯಶವಂತಪುರ ಫ್ಲೈಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಅವರು ಪ್ರಾಣಾಯದಿಂದ ಅವರು ಪಾರಾಗಿದ್ದಾರೆ. ಸಂಜಯನಗರದಿಂದ ಕಾರ್ ನಲ್ಲಿ ರಾಜಾಜಿನಗರಕ್ಕೆ ಯಶ್ವಂತಪುರ ಮಾರ್ಗವಾಗಿ ಕಾರ್ ನಲ್ಲಿ ವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಗಾಯಗೊಂಡಿದ್ದ ನಾಲ್ವರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ಪಲ್ಟಿಯಾಗಿದ್ದ ಕಾರ್ ಅನ್ನು ಮೇಲೆತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular