HomeKarnatakaBREAKING : ಬೆಂಗಳೂರಲ್ಲಿ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ವಿಡಿಯೋ ಚಿತ್ರೀಕರಣ; ಮೂವರು ಆರೋಪಿಗಳು ಅರೆಸ್ಟ್.!

BREAKING : ಬೆಂಗಳೂರಲ್ಲಿ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ವಿಡಿಯೋ ಚಿತ್ರೀಕರಣ; ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮಹಿಳೆಯೊಬ್ಬರನ್ನು ಅಪಹರಿಸಿ ವಿಡಿಯೋ ಚಿತ್ರೀಕರಿಸಿ, ಹಣ ನೀಡದಿದ್ದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರಿನ ಚಂದ್ರಾಲೇಔಟ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ರೇಷ್ಮಾ ಭಾನು, ನಝತ್ ಹಾಗೂ ಸುಹೇಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ಪೈಕಿ ಇಬ್ಬರು ಮಹಿಳೆಯರು ಎನ್ನಲಾಗಿದೆ.ಮಹಿಳೆಯನ್ನು ಅಪಹರಿಸಿ ವಿಡಿಯೋ ಚಿತ್ರೀಕರಿಸಿದ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಸಂತ್ರಸ್ತೆ ರೇಷ್ಮಾ ಬಳಿ ಸುಮಾರು ₹1 ಲಕ್ಷ ಸಾಲ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ರೇಷ್ಮಾ ನಡುವೆ ಪರಿಚಯವಿತ್ತು. ಇದೇ ಪರಿಚಯವನ್ನು ಬಳಸಿಕೊಂಡು ಸಂತ್ರಸ್ತೆಯನ್ನು ಅಪಹರಿಸಿ, ಬಳಿಕ ವಿಡಿಯೋ ಚಿತ್ರೀಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆ ತನ್ನ ತಾಯಿ ಮನೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡಿ ಆಟೋದಲ್ಲಿ ಬಲವಂತವಾಗಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿ  ಕುಂಬಳಗೋಡು ಸಮೀಪದ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ವಿಡಿಯೋ ಮಾಡಿದ್ದಾರೆ. ಹಣ ಕೊಡದಿದ್ದರೆ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ..

ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಚಂದ್ರಾಲೇಔಟ್ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದ ಇತರ ಅಂಶಗಳ ಕುರಿತು ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular