HomeKarnatakaಎಕ್ಸ್ ಪ್ರೆಸ್ ವೇನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಬಾಲಕ ದುರ್ಮರಣ

ಎಕ್ಸ್ ಪ್ರೆಸ್ ವೇನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಬಾಲಕ ದುರ್ಮರಣ

ಕೋಲಾರ: ಇನ್ನೋವಾ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಷ್ಮೀ ಸಾಗರದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಒರ್ವ ಬಾಲಕ ಸಾವುನ್ನಪ್ಪಿದ್ದಾನೆ. ಬಂಗಾರಪೇಟೆ ಮೂಲದ ಮುಜಾಮಿಲ್ (9) ಮೃತ ಬಾಲಕ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡ ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಅವರನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular