HomeKarnatakaಸೆಪ್ಟೆಂಬರ್ 3-4ರಂದು ಬಂದ್ ಆಗಲಿವೆ ಚಿಕನ್ ಅಂಗಡಿಗಳು

ಸೆಪ್ಟೆಂಬರ್ 3-4ರಂದು ಬಂದ್ ಆಗಲಿವೆ ಚಿಕನ್ ಅಂಗಡಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 3 ಹಾಗೂ 4ರಂದು ಚಿಕನ್ ಅಂಗಡಿಗಳು ಬಂದ್ ಆಗಲಿವೆ. ಚಿಕನ್ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ 5 ರೂಪಾಯಿ ಶುಲ್ಕ ನಿಗದಿ ಮಾಡಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಕ್ರಮವನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಪ್ರತಿಭಟನೆಗೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ಮತ್ತು 4ರಂದು ಬೆಂಗಳೂರಿನ ಚಿಕನ್ ಅಂಗಡಿಗಳು ಬಂದ್ ಆಚರಿಸಲು ನಿರ್ಧರಿಸಿವೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಮಾಹಿತಿ ಪ್ರಕಾರ, ಸೆಪ್ಟೆಂಬರ್ 3ರಂದು ಚಿಕನ್ ಅಂಗಡಿಗಳನ್ನು ಬಂದ್ ಮಾಡಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಸೆಪ್ಟೆಂಬರ್ 4ರಂದು ಬೆಂಗಳೂರಿನಾದ್ಯಂತ ಚಿಕನ್ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು.

ಅಸೋಸಿಯೇಷನ್ ಹೇಳಿರುವಂತೆ, ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 7 ಲಕ್ಷ ಕೆಜಿ ಚಿಕನ್ ಮಾರಾಟವಾಗುತ್ತಿದ್ದು, 2ರಿಂದ 3 ಲಕ್ಷ ಕೆಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಒಂದು ಚಿಕನ್ ಅಂಗಡಿಯಿಂದ ದಿನಕ್ಕೆ ಸರಾಸರಿ 30 ಕೆಜಿ ತ್ಯಾಜ್ಯ ಹೊರಬರುತ್ತದೆ ಎಂದು ಸಂಘಟನೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಕೆಜಿ ಚಿಕನ್ ತ್ಯಾಜ್ಯಕ್ಕೆ 5 ರೂ. ದರ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ, ಒಂದು ಅಂಗಡಿಯವರು ದಿನಕ್ಕೆ ಸುಮಾರು 150 ರೂ. ಹಾಗೂ ತಿಂಗಳಿಗೆ ಸುಮಾರು 4,500 ರೂ. ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ವಿರೋಧಿಸಿ ಅಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದರಿಂದ ಬೆಂಗಳೂರಿನ ಸುಮಾರು 6ರಿಂದ 7 ಸಾವಿರ ಚಿಕನ್ ಅಂಗಡಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular