ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟಿ20 ಪಂದ್ಯ ಹಿನ್ನೆಲೆಯಲ್ಲಿ ಕೆಲ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ವಾಹನಗಳ ನಿಲುಗಡೆಗೆ ನಿಷೇಧಿಸಿರುವ ರಸ್ತೆಗಳು:
ಕ್ವೀನ್ಸ್ ರಸ್ತೆಯ ಎರಡು ಬದಿಯಲ್ಲಿ, ಬಾಲೇಕ್ಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ ಜಂಕ್ಷನ್ವರೆಗೆ
ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಅನಿಲ್ಕುಂಬ್ಳೆ ವೃತ್ತದವರೆಗೆ ಮತ್ತು ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ.
ಲಿಂಕ್ ರಸ್ತೆ – ಎಂ.ಜಿ ರಸ್ತೆಯಿಂದ ಕ್ವೀನ್ಸ್ ರಸ್ತೆವರೆಗೆ
ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
ಸೆಂಟ್ರಲ್ ಸ್ಕ್ವೇರ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.
ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ವೃತ್ತದವರೆಗೆ ಎರಡೂ ಕಡೆ,
ಕಾಮರಾಜ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಡಿಕನ್ಸನ್ ಜಂಕ್ಷನ್ವರೆಗೆ
ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಆಶೀರ್ವಾದಂ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
ಎಸ್.ಬಿ.ಐ ಜಂಕ್ಷನ್ನಿಂದ ಕ್ಯಾಶ್ ಫಾರ್ಮಸಿ ಜಂಕ್ಷನ್ವರೆಗೆ.
ಮ್ಯೂಸಿಯಂ ಕ್ರಾಸ್ ರಸ್ತೆ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ
ಕಸ್ತೂರಬಾ ರಸ್ತೆಯಲ್ಲಿ, ಹಡ್ಸನ್ ವೃತ್ತದಿಂದ ಕ್ವೀನ್ಸ್ವೃತ್ತದವರೆಗೆ
ಕಬ್ಬನ್ಪಾರ್ಕ್ ಒಳಗಿನ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಜಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ವಾಹನ ಪಾರ್ಕಿಂಗ್ ವ್ಯವಸ್ಥೆ: (ಬೆಳಿಗ್ಗೆ 11-00 ರಿಂದ ರಾತ್ರಿ 09-00)
ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳ
ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ.
ಫ್ರೀಡಂ ಪಾರ್ಕ್ ಎಂ.ಎಲ್.ಸಿ.ಪಿ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ
ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ
ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್ಪಾರ್ಕ್ ಒಳಗಿನ ಟೆನ್ನಿಸ್ ಕ್ಲಬ್ ರಸ್ತೆಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಲು ಹಾಗೂ ಹೊರಗೆ ಹೋಗಲು ಅವಕಾಶ ಕಲ್ಪಿಸಿರುವ ಸ್ಥಳಗಳೆಂದರೆ ಗೇಟ್ ನಂ-1 ರಿಂದ ಗೇಟ್ ನಂ-3 ಮತ್ತು ಗೇಟ್ ನಂ ಇ-18, ಇ-19, ಇ-22 ಹಾಗೂ ಇ-23 ಕಬ್ಬನ್ ರಸ್ತೆಯಲ್ಲಿದ್ದು, ಈ ಗೇಟ್ಗಳ ಮುಖಾಂತರ ಪ್ರವೇಶಿಸಬಹುದಾಗಿದೆ .
ಗೇಟ್ ನಂ. ಇ-11 ರಿಂದ ಗೇಟ್ ನಂ ಇ-17 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶಿಸಬಹುದಾಗಿದೆ. ಕ್ವೀನ್ಸ್ ರಸ್ತೆಯಲ್ಲಿ ಗೇಟ್ ನಂ. ಇ-07 ಮತ್ತು ಇ-08 ರಲ್ಲಿ ಪ್ರವೇಶಿಸದ್ದು, ಗೇಟ್ ನಂ- ಇ-09, ಇ-9ಎ ಗೇಟ್ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶವಿರುತ್ತದೆ. ಕ್ವೀನ್ಸ್ ರಸ್ತೆಯ ಗೇಟ್ ನಂ-210 ರಲ್ಲಿ ಆಟಗಾರರು, ಸಹ ಆಟಗಾರರು ಹಾಗೂ ಸ್ಟೇಡಿಯಂ ಅಧಿಕಾರಿಗಳು ಬಿ.ಸಿ.ಸಿ ಐ ರವರಿಗೆ ಅವಕಾಶವಿರುತ್ತದೆ.

