BIG NEWS: ಬಸ್ ನಲ್ಲಿ ಸಿಟಿ ರೌಂಡ್ಸ್ ಮುಗಿಸಿ ಮೆಟ್ರೋ ಏರಿದ ಸಿಎಂ: ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ, ಬಸ್ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಅನುಭವವನ್ನು ಕೇಳಿ ಮಾಹಿತಿ ಪಡೆದುಕೊಂಡರು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದೆ.

ಕೆಲಕ್ಷಣಗಳ ಈ ಪಯಣದಲ್ಲಿ ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಕೇಳಿದೆ. ಯಾವುದೇ ತ್ರಾಸವಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದಾದ ಮೆಟ್ರೋ ರೈಲು ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿ ಬದಲಾಗುತ್ತಿದೆ. ಹೀಗಾಗಿ ಕಾಮಗಾರಿಗಳಿಗೆ ವೇಗ ನೀಡಿ, ನಗರದ ಬಹುತೇಕ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read