ಬೆಂಗಳೂರು: ರಾಷ್ಟ್ರಮಟ್ಟದ ಪ್ರತಿಷ್ಠಿತ ಚೆನ್ನೈ ಸಂಸ್ಥೆಯೊಂದು 125 ನಗರಗಳನ್ನೊಳಗೊಂಡಂತೆ ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಬೆಂಗಳೂರು ನಗರವು ಮಹಿಳೆಯರಿಗೆ ಹೆಚ್ಚು ಸುರಕ್ಷಿತ ನಗರವೆಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇಂಡಿಯಾ ಜಸ್ಟೀಸ್ ರಿಪೋರ್ಟ್ 2025ರ ಪ್ರಕಾರ ನಮ್ಮ ರಾಜ್ಯವು ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಮೊದಲನೇ ಸ್ಥಾನದಲ್ಲಿದೆ. ಈ ಎರಡೂ ಸಮೀಕ್ಷೆಗಳು ನಮ್ಮ ಕರ್ನಾಟಕ ಎಷ್ಟು ಸುರಕ್ಷಿತ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

