
ಬೆಂಗಳೂರು: ರಾಜ್ಯಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಈವರೆಗೆ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 23 ಜನರಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ದಾಖಲಾಗಿರುವ ಕೋವಿಡ್ ಕೇಸ್ ಗಳಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಕೊರೊನಾ ರೂಪಾಂತರ ವೈರಸ್ JN.1ಗೆ ಬೆಂಗಳೂರೇ ಮೊದಲ ಟಾರ್ಗೆಟ್ ಆಗುತ್ತಾ ಎಂಬ ಆತಂಕ ಶುರುವಾಗಿದೆ.
ರಾಜ್ಯದಲ್ಲಿ ಈವರೆಗೆ 105 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿಯೇ 93 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 50 ಜನರ ಸ್ಯಾಂಪಲ್ ನ್ನು ಜೆನೆಮಿಕ್ ಸೀಕ್ವೆನ್ಸ್ ಗೆ ರವಾನಿಸಲಾಗಿದೆ. ವರದಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

 
		 
		 
		 
		 Loading ...
 Loading ... 
		 
		 
		