HomeKarnatakaಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಫೋಟಗೊಂಡು ತಾಯಿ, ಮೂರು ವರ್ಷದ ಮಗು ದುರ್ಮರಣ

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಸಿಲಿಂಡರ್ ಸ್ಫೋಟಗೊಂಡು ತಾಯಿ, ಮೂರು ವರ್ಷದ ಮಗು ದುರ್ಮರಣ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಮ್ಡಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್‌ನಲ್ಲಿ ಕಳೆದ 25 ವರ್ಷಗಳಿಂದ ವಾಸವಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಅಗಿತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸೋಮವಾರ ಬೆಳಗ್ಗೆ ಸುಮಾರು 6:20ರ ವೇಳೆಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿತ್ತು. ಬಾಗಿಲು ತೆಗೆದು ಅಡುಗೆ ಮಾಡಲು ಸ್ಟೌವ್ ಹಚ್ಚಿದ ಕೂಡಲೇ ಸಿಲಿಂಡರ್ ಸ್ಫೋಟಗೊಂಡಿದೆ. ಕಳೆದ ಮೂರು ದಿನಗಳಿಂದ ಸಿಲಿಂಡರ್‌ನಲ್ಲಿ ಲೀಕೇಜ್ ಸಮಸ್ಯೆ ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಫೋಟದ ಪರಿಣಾಮ ಕರಿಲಿಂಗಪ್ಪ, ಅವರ ಪತ್ನಿ ಲಕ್ಷ್ಮಮ್ಮ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಎಲ್ಲರನ್ನೂ ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಮ್ಮ ಹಾಗೂ ಅವರ ಮೂರು ವರ್ಷದ ಅವಳಿ ಮಕ್ಕಳಲ್ಲಿ ಒಂದು ಮಗು ಮೃತಪಟ್ಟಿದೆ.

ಲಕ್ಷ್ಮಮ್ಮ ಅವರಿಗೆ ಸುಮಾರು ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದರೆ, ಕರಿಲಿಂಗಪ್ಪ ಅವರಿಗೆ ಶೇ.45ರಷ್ಟು ಸುಟ್ಟ ಗಾಯಗಳಾಗಿವೆ. 11 ವರ್ಷದ ಚೈತ್ರಾ, 9 ವರ್ಷದ ಬಸವ ಹಾಗೂ ಮತ್ತೊಂದು ಮೂರು ವರ್ಷದ ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯೊದಿಗೆ ನಿರಂತರ ಸಂಪರ್ಕ: ಕಾನ್ಸ್‌ಟೇಬಲ್‌ ಸಸ್ಪೆಂಡ್

ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕ ಹೊಂದಿದ್ದು, ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಎನ್.ಆರ್.ಪುರ ಠಾಣೆಯ ಕಾಂತೇಶ್ ಅಮಾನತಾದ ಪೇದೆ. ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕುಟುಂಬದ ಜೊತೆ ಕಾಂತೇಶ್‌ ನಿರಂತರ ಸಂಪರ್ಕದಲ್ಲಿದ್ದರು.

ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿರುವ ಆರೋಪಿ ಸತೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ ಆರೋಪಿಗೆ ಠಾಣೆಯ ಸಂಪೂರ್ಣ ಮಾಹಿತಿಯನ್ನು ಕಾಂತೇಶ್ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲ್ರೆಯಲ್ಲಿ ಕಾಂತೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇನ್ನು ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕೋಳಿ ರಕ್ತ ಕುಡಿಯುವಂತೆ ಸತೀಶ್ ಹಿಂಸೆ ನೀಡಿದ್ದ. ವಿಡಿಯೋ ವೈರಲ್ ಬೆನ್ನಲ್ಲೇ ಆತನ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular