HomeKarnatakaBIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದಾನೆ.

11 ವರ್ಷದ ಬಾಲಕ ಗಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಅಂಜನಾಪುರದ ಗಗನ್ ಜಂಬೂಸವಾರಿ ದಿಣ್ಣೆ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ.

ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ ತಡರಾತ್ರಿ ಬಾಲಕ ಮನೆಯಲ್ಲಿ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾನೆ. ಡೆಂಘೀ ಸೋಂಕಿನಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular