HomeKarnatakaರಸ್ತೆ ಮಧ್ಯೆಯೇ ಧಗ ಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ರಸ್ತೆ ಮಧ್ಯೆಯೇ ಧಗ ಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್

ಬೆಂಗಳೂರು: ರಸ್ತೆ ಮಧ್ಯೆಯೇ ಎಲೆಕ್ಟ್ರಿಕ್ ಬೈಕ್ ವೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಆರ್.ಆರ್.ನಗರದ ಬೆಮೆಲ್ ಲೇಔಟ್ ನಲ್ಲಿ ನಡೆದಿದೆ.

ಶಿವಾನಂದ ಎಂಬುವವರ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಎಂದಿನಂತೆ ಬೈಕ್ ನಲ್ಲಿ ಆರ್.ಆರ್.ನಗರದ ಕಚೇರಿಗೆ ಬಂದಿದ್ದ ಶಿವಾನಂದ ಬಳಿಕ ನಾಗರಬಾವಿಗೆ ತೆರಳಲು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಸಣ್ಣದಾಗಿ ಹೊಗೆ ಕಾಣಿಸಿಕೊಂಡಿದೆ. ಸ್ಕೂಟರ್ ನಿಂದ ಹೊಗೆ ಬರುತ್ತಿರುವುದನ್ನು ಕಂಡು ತಕ್ಷಣ ರಸ್ತೆ ಬದಿ ನಿಲ್ಲಿಸಿದ್ದಾರೆ.

ಕ್ಷಣ ಮಾತ್ರದಲ್ಲೇ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಹೊತ್ತಿ ಉರಿದಿದೆ. ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular