HomeKarnatakaಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: ಡಿಕೆ ಶಿವಕುಮಾರ್

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: ಡಿಕೆ ಶಿವಕುಮಾರ್

ಬೆಂಗಳೂರು- ವಿಶ್ವವೇ ಬೆಂಗಳೂರನ್ನು ನೋಡುತ್ತಿದೆ. ಬೆಂಗಳೂರು ಜಗತ್ತಿನ ಪ್ರಮುಖ ನಗರವಾಗಿ ಬೆಳೆಯುತ್ತಿದೆ. ಈ ಬೆಳವಣಿಗೆಯ ಹಿಂದೆ ಸಾವಿರಾರು ರೈತರು, ಭೂ ಮಾಲೀಕರ ಕೊಡುಗೆ ಇದೆ. ಹೀಗಾಗಿ ಅಭಿವೃದ್ಧಿಯ ಜೊತೆಗೆ ಭೂಮಿ ಕೊಟ್ಟವರ ಕುಟುಂಬಗಳ ಬದುಕು ಬೆಳೆಯಬೇಕು. ಅಭಿವೃದ್ಧಿಯ ಫಲದಲ್ಲಿ ಅವರಿಗೂ ನ್ಯಾಯಯುತ ಪಾಲು ಸಿಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಭೂ ಮಾಲೀಕರಿಗೆ ಹಕ್ಕು ರಕ್ಷಣೆ

ಇಂದು ಬೆಂಗಳೂರಿನ ನೆಹರೂ ತಾರಾಲಯದ ಯು.ಆರ್. ಭವನದಲ್ಲಿ ನಡೆದ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ಭೂ ಮಾಲೀಕರಿಗೆ ನಿವೇಶನ ಹಂಚಿಕೆ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭೂಮಿ ನೀಡಿದ ರೈತರ ಕೊಡುಗೆಯನ್ನು ಸರ್ಕಾರ ಎಂದಿಗೂ ಮರೆಯುವುದಿಲ್ಲ. ಅವರ ತ್ಯಾಗ ದೊಡ್ಡದು. ಹಾಗಾಗಿ ಅವರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇದು ಕೇವಲ ನಿವೇಶನ ಹಂಚಿಕೆಯ ಪತ್ರ ವಿತರಿಸುವ ಕಾರ್ಯಕ್ರಮವಲ್ಲ. ಹಲವು ವರ್ಷಗಳಿಂದ ಕಾಯುತ್ತಿರುವ ಭೂ ಮಾಲೀಕರ ನಿರೀಕ್ಷೆಗಳಿಗೆ ಉತ್ತರ ನೀಡುವ ದಿನ. ಬೆಂಗಳೂರಿನ ಅಭಿವೃದ್ಧಿಗಾಗಿ ಭೂಮಿ ನೀಡಿದವರಿಗೆ ಅಭಿವೃದ್ಧಿಯಲ್ಲೇ ಪಾಲು ನೀಡುವ ದಿನವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಯೋಜನೆ

ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಯೋಜನೆ ಹಲವು ವರ್ಷಗಳಿಂದ ಭೂ ಸ್ವಾಧೀನ, ಕಾನೂನು ವ್ಯಾಜ್ಯಗಳು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳ ನಡುವೆ ಸಾಗಿ ಬಂದಿದೆ. ಕಾನೂನು ಮತ್ತು ನ್ಯಾಯಾಲಯದ ನಿರ್ದೇಶನಗಳನ್ನು ಗೌರವಿಸುತ್ತಲೇ, ಅರ್ಹ ಭೂ ಮಾಲೀಕರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಅನಗತ್ಯ ವಿಳಂಬಕ್ಕೆ ಅವಕಾಶ ನೀಡದೇ ದಾಖಲೆಗಳ ಆಧಾರದ ಮೇಲೆ ಅರ್ಹರಿಗೆ ಅವರ ಹಕ್ಕುಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಇನ್ನು ಲೇಔಟ್ ನ ರಸ್ತೆ ಗೆ ಮಾಜಿ ಮುಖ್ಯ ಮಂತ್ರಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಲಾಗುವುದು ಎಂದರು. ಹಾಗೆ ಲೇಔಟ್ ಗೆ ಜಮೀನು ಕೊಟ್ಟವರ ಹೆಸರು ಗಳನ್ನು ನೆನಪಿನಲ್ಲಿ ಉಳಿಯುವಂತೆ ಮಾಡಲಾಗುವುದು ಎಂದರು.

ಭೂ ಮಾಲೀಕರಿಗೆ ಸಲಹೆಗಳು

ಜಾಗ ನಿಮ್ಮದು.. ತ್ಯಾಗ ನಿಮ್ಮದು.. ಅಭಿವೃದ್ಧಿ ಬೆಂಗಳೂರಿನದು. ನಿಮ್ಮ ನೋವು ಗೊತ್ತಿದೆ. ಕಷ್ಟ ಗೊತ್ತಿದೆ. ಆದ್ರೆ ನಿಮ್ಮ ನಿವೇಶನಗಳನ್ನು ಮಾರಾಟ ಮಾಡಬೇಡಿ. ನಿಮ್ಮ ಸೈಟ್ಗಳಿಗೆ ಉತ್ತಮ ಬೆಲೆ ಸಿಗುತ್ತೆ ಎಂದು ಭೂ ಮಾಲೀಕರಿಗೆ ಸಲಹೆ ನೀಡಿದರು.

ಡಾ. ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯ 24,714 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ಪೈಕಿ 18,399 ನಿವೇಶನಗಳನ್ನು ರೈತರು ಹಾಗೂ ಭೂ ಮಾಲೀಕರಿಗೆ ನೀಡಲಾಗಿದೆ. 3,500 ರೆವೆನ್ಯೂ ಸೈಟ್ ಹಾಗೂ 2,815 ಸೈಟ್‍ಗÀಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು. ಡಾ. ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ 40:60 ಅಭಿವೃದ್ಧಿ ಮಾದರಿಯನ್ನು ಅನುಸರಿಸಲಾಗಿದೆ. ಒಂದು ಎಕರೆ ಭೂಮಿಗೆ 9,583 ಚದರ ಅಡಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲಾಗುವುದು ಎಂದರು.

ವಿಬಾಗದ ನಿವೇಶನ ಹಂಚಿಕೆ

ಬಡಾವಣೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕ ಮೂಲ ಸೌಕರ್ಯದ ದೃಷ್ಟಿಯಿಂದ ಕೆಲವು ನಿವೇಶನಗಳನ್ನು ಭೂ ಮಾಲೀಕರಿಗೆ ಹಂಚಿಕೆ ಮಾಡಲು ಸಾಧ್ಯವಿಲ್ಲ. ಮುಖ್ಯವಾಗಿ ಕಾರ್ನರ್ ಸೈಟ್, ಕಮರ್ಷಿಯಲ್ ಸೈಟ್, ಸಿಎ ಸೈಟ್ಸ್, ಪಾರ್ಕ್‍ಗಳು, ಅಗಲವಾದ ರಸ್ತೆಗೆ ಹೊಂದಿಕೊಂಡಿರುವ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲಾಗುತ್ತಿಲ್ಲ. ನಗರ ಯೋಜನೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿವೇಶನಗಳನ್ನು ಪ್ರತ್ಯೇಕವಾಗಿ ಪರಿಣಗಣಿಸಲಾಗಿದೆ. ಹಾಗೇ ಫಲಾನುಭವಿಗಳಿಗೆ ಅಗತ್ಯ ದಾಖಲೆ ನೀಡಿ, ನಿವೇಶನದ ಅಧಿಕೃತ ಸ್ವಾಧೀನ ಪಡೆಯುವವವರೆಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರ ಭಾಗದಲ್ಲಿರುವ 17 ಹಳ್ಳಿಗಳನ್ನು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು, ಡಾ. ಕೆ. ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಾಣ ಮಾಡಿದೆ. ಒಟ್ಟು 3,200 ವ ಭೂ ಮಾಲೀಕರಿಂದ 3,069 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಒಟ್ಟು 34,992 ನಿವೇಶನಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. ಒಟ್ಟಾರೆ, 16,419.89 ಕೋಟಿ ವೆಚ್ಚದಲ್ಲಿ ಡಾ. ಕೆ. ಶಿವರಾಮ ಕಾರಂತ ಬಡಾವಣೆಯನ್ನು ನಿರ್ಮಾಣ ಮಾಡಲಾಗಿದೆ .

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎನ್. ಎಂ. ಹ್ಯಾರಿಸ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಸಚಿವರಾದ ಕೃಷ್ಣ ಬೈರೇಗೌಡ, ಶಾಸಕರಾದ ಎಸ್ ಆರ್ ವಿಶ್ವನಾಥ್. ಮುನಿರಾಜು. ಬಿಡಿಎ ಆಯುಕ್ತ ಮನಿವಣ್ಣನ್ ಹಾಗೂ ಬಿಡಿಎ ಸದಸ್ಯರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular