HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಬೆಂಕಿಯಲ್ಲಿ ಹೊತ್ತಿ ಉರಿದ ಕಟ್ಟಡ

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಬೆಂಕಿಯಲ್ಲಿ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪೇಪರ್ ವಸ್ತುಗಳ ತಯಾರಿಕಾ ಘಟಕದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಚಿಕ್ಕಪೇಟೆಯ ಸೇತುರಾವ್ ರಸ್ತೆಯಲ್ಲಿನ ಬಾಲಾಜಿ ಪ್ಲಾಸ್ಟಿಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೂರನೇ ಮಹಡಿ ಹೊತ್ತಿ ಉರಿದಿದೆ. ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಗಳನ್ನು ಇಲ್ಲಿ ತಯಾರಿಸಲಾಗುತ್ತಿತ್ತು.

ಕಟ್ಟಡದಲ್ಲಿ ಬೆಂಕಿಯಿಂದಾಗಿ ಅಪಾರಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular