ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ ಸಂಭವಿಸಿ ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಪರಪ್ಪನ ಅಗ್ರಹಾರ ಬಳಿ ನಡೆದಿದೆ.

ಸುಮಾರು 5 ಎಕರೆ ಪ್ರದೇಶದ ಗೋದಾಮು ಇದಾಗಿದ್ದು, ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಎರಡು ಟ್ರ್ಯಾಕ್ಟರ್, ಒಂದು ಟಾಟಾ ಏಸ್, ಬೈಕ್ ಬೆಂಕಿಗಾಹುತಿಯಾಗಿದೆ.

ಮೊದಲು ಗೋದಾಮಿನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಇಡೀ ಗೋದಾಮಿಗೆ ಆವರಿಸಿದೆ. 8 ಅಗ್ನಿಶಾಮಕ ತಂಡ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಸತತ ಹತ್ತು ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ತಹಬದಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read