HomeKarnatakaBREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ.

ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ. ಶೆಡ್ ನಲ್ಲಿ ಪಾರ್ಕಿಂಗ್ ಶುಲ್ಕ ನೀಡಿ ಚಾಲಕರು ಆಟೋ ನಿಲ್ಲಿಸಿದ್ದರು. ರಿಜ್ವಾನ್ ಎಂಬುವರಿಗೆ ಸೇರಿದ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಲ್ಲಿ ಸುಮಾರು 40 ರಿಂದ 50 ಆಟೋಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular