HomeKarnatakaBREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಸೆಂಟ್ರಿಂಗ್ ಗೋಡೌನ್ ಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ...

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಸೆಂಟ್ರಿಂಗ್ ಗೋಡೌನ್ ಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಕರಕಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಸೆಂಟ್ರಿಂಗ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರದ ಸೆಂಟ್ರಿಂಗ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಗೋಡೌನ್ ಮಾಲೀಕರು ಸ್ಥಳದಿಂದ ತೆರಳಿದ ನಂತರ ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular