ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಹೆಚ್ಚಳ, ಅಪಘಾತ ತಡೆ, ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಪ್ರಮುಖ ಫ್ಲೈಓವರ್ ಗಳಲ್ಲಿ ಕೆಲ ವಾಹನಗಳ ಸಂಚಾರವನ್ನು ಸಂಚಾರ ಪೊಲೀಸರು ನಿರ್ಬಂಧಿಸಿದ್ದಾರೆ.
ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್, ಪೀಣ್ಯ ಫ್ಲೈಓವರ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಸಿಲ್ಕ್ ಬೋರ್ಡ್- ರಾಗಿಗುಡ್ಡ ಡಬಲ್ ಡೆಕ್ಕರ್ ಹಾಗೂ ವಿಮಾನ ನಿಲ್ದಾಣ ರಸ್ತೆಯ ಫ್ಲೈಓವರ್ ಗಳಲ್ಲಿ ಸರಕು ಸಾಗಣೆ ವಾಹನಗಳು, ಆಟೋ ಮತ್ತು ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿಗದಿತ ಸಮಯ ಅಥವಾ 24 ಗಂಟೆಗಳ ಕಾಲ ತಡೆ ಹೇರಲಾಗಿದೆ. ಫ್ಲೈಓವರ್ ಗಳ ವಿನ್ಯಾಸ, ಸವಾರರ ಸುರಕ್ಷತೆ ಮತ್ತು ತುರ್ತು ಸಂಚಾರ ನಿರ್ವಹಣೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು: ರಸ್ತೆ ಸುರಕ್ಷತೆ, ಸುಗಮ ಸಂಚಾರ ಹಾಗೂ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸರು ಬೆಂಗಳೂರಿನ ಹಲವು ಪ್ರಮುಖ ಫ್ಲೈಓವರ್ ಗಳಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಕೆಲ ವಾಹನಗಳ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಬಿಜಿಎಸ್ ಮೇಲ್ಸೇತುವೆ, ಪೀಣ್ಯ ಎಲಿವೇಟೆಡ್ ಕಾರಿಡಾರ್, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಫ್ಲೈಓವರ್ (ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ), ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್ ನಲ್ಲಿ ಸಂಜೀವ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ) ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೊರಿಕ್ಷಾಗಳು ಹಾಗೂ ತ್ರಿಚಕ್ರ ಗೂಡ್ಸ್ ಆಟೊಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್ ಮೇಲೆ ಭಾರಿ ಸರಕು ವಾಹನಗಳಿಗೆ ದಿನದ 24 ಗಂಟೆ ಸಂಚಾರ ನಿರ್ಬಂಧಿಸಲಾಗಿದೆ. ಗೂಡ್ಸ್ ಆಟೋಗಳು, ಇತರೆ ಸರಕು ಸಾಗಾಣೆ ವಾಹನಗಳಿಗೆ ಬೆಳಗ್ಗೆ 7 ಗಂಟೆಯಿಂದ 11 ಗಂಟೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಮಾರ್ಗದಲ್ಲಿ ಭಾರಿ ಸಂಟಾರ ದಟ್ಟಣೆ ಹಿನ್ನೆಲೆ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟ ಫ್ಲೈಓವರ್ ಮೇಲೆ ದ್ವಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಆಟೋ ರಿಕ್ಷಾ, ಮೂರು ಚಕ್ರದ ಗೂಡ್ಸ್ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ತನಕೆ ಎಲ್ಲಾ ಮಾದರಿಯ ಸರಕು ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಲಿವೇಟೆಡ್ ಫ್ಲೈ ಓರ್ ಮೇಲೆ ದ್ವಿಚಕ್ರ ವಾಹನ ಮಾತ್ರವಲ್ಲ, ಆಟೋ, ಗೂಡ್ಸ್ ರಿಕ್ಷಾಗಳಿಗೂ ಸಂಚಾರಕ್ಕೂ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ದಿನದ 24 ಗಂಟೆ ಈ ಫ್ಲೈ ಓವರ್ ಮೇಲೆ ದ್ವಿಚಕ್ರ ವಾಹನ, ಆಟೋ ಸಂಚಾರ ಮಾಡುವಂತಿಲ್ಲ. ಎಲ್ಲಾ ಮಾದರಿಯ ಸರಕು ಸಾಗಾಣೆ ವಾಹನಗಳಿಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ.
ಪೀಣ್ಯಾ ಫ್ಲೈಓವರ್ ಮೇಲೆ ಆಟೋ ಸಂಚಾರಕ್ಕೆ, ಗೂಡ್ಸ್ ಆಟೋಗಳ ಸಂಚಾರ ನಿರ್ಬಂಧಿಸಲಾಗಿದೆ. ಭಾರಿ ಹಾಗೂ ಮಧ್ಯಮ ಸರಕು ವಾಹನಗಳಿಗೆ ಬೆಳಗ್ಗೆ 7 ರಿಂದ 11 ಗಂಟೆ ಹಾಗೂ ಸಂಜೆ 4 ರಿಂದ ರಾತ್ರಿ 11 ಗಂಟೆ ವರೆಗೆ ನಿರ್ಬಂಧಿಸಲಾಗಿದೆ. ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಭಾರಿ ಘನ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಸಾರ್ವಜನಿಕರು ಸಂಚಾರದಲ್ಲಿ ಮಾಡಿರುವ ಬದಲಾವಣೆ ಗಮನಿಸಿ ಸಹಕರಿಸಲು ಪೊಲೀಸರು ಮನವಿ ಮಾಡಿದ್ದಾರೆ.

