HomeKarnatakaಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳ ದಾಳಿ: ಡೈನಿಂಗ್ ಟೇಬಲ್‌ನಲ್ಲಿಯೇ ತಿಗಣೆ ಔಷಧಿಯೂ...

ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳ ದಾಳಿ: ಡೈನಿಂಗ್ ಟೇಬಲ್‌ನಲ್ಲಿಯೇ ತಿಗಣೆ ಔಷಧಿಯೂ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪೇಯಿಂಗ್ ಗೆಸ್ಟ್ (ಪಿಜಿ)ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಪ್ರದೇಶದಲ್ಲಿರುವ ಪಿಜಿ ವಸತಿ ಗೃಹಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಬರೋಬ್ಬರಿ 64 ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಹಲವಾರು ಕಡೆಗಳಲ್ಲಿ ಆಹಾರ ಸುರಕ್ಷತೆಯ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿಯ ವೇಳೆ, 23 ಪಿಜಿಗಳಿಂದ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಈ ಪರೀಕ್ಷೆಗಳ ಪ್ರಾಥಮಿಕ ವರದಿಯಲ್ಲಿ, ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಿಜಿಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನಿಸುವಂತೆ ಮಾಡಿದೆ.

ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಪತ್ತೆ:

ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಿ ಸ್ವಲ್ಪವೂ ಸ್ವಚ್ಛತೆ ಇಲ್ಲದಿರುವುದು ಕಂಡುಬಂದಿದೆ. ಇಲ್ಲಿ ಕಳಪೆ ನೈರ್ಮಲ್ಯದ ಜೊತೆಗೆ ಊಟದ ಮೇಜಿನ ಮೇಲೆ ಕಸ, ಕಡ್ದಿಗಳು, ಗಲೀಜು ಕಂಡುಬಂದಿದೆ. ಅಚ್ಚರಿಯ ವಿಷಯವೆಂದರೆ, ಪಿಜಿಯ ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಕೂಡ ಪತ್ತೆಯಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ನೈರ್ಮಲ್ಯ ಉಲ್ಲಂಘನೆಯ ಆರೋಪದ ಮೇಲೆ ಈ ಪಿಜಿಯ ಊಟದ ಪ್ರದೇಶವನ್ನು ತಕ್ಷಣವೇ ಮುಚ್ಚಲು ಆದೇಶಿಸಲಾಗಿದೆ.

ಪಿಜಿಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರು ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸ್ವಚ್ಛತೆ ಇಲ್ಲದ, ಗುಣಮಟ್ಟದ ಆಹಾರ ನೀಡದ ಹಾಗೂ ಆಹಾರ ಸುರಕ್ಷತೆ ನಿಯಮ ಉಲ್ಲಾಂಘಿಸಿರುವ ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಆಹಾರ ಸಚಿವ ಯು.ಟಿ.ಖಾದರ್ ಸೂಚನೆ ಮೇರೆಗೆ ಪಿಜಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ:

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಅಟ್ಟಹಾಸ ಮೆರೆದಿದ್ದು, ಜೈಲಿನ ವಾರ್ಡರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಜೈಲಿನ ಸಿಬ್ಬಂದಿಗಳೇ ಜೀವ ಭಯದಲ್ಲಿ ಇರಬೇಕಾದ ಸ್ಥಿತಿ ಎದುರಾಗಿದೆ. ಜೈಲು ವಾರ್ಡರ್ ಮಂಜುನಾಥ್ ಹವೇಲಿ ಎಂಬುವವರ ಅವರ ಮೇಲೆ ಕೈದಿಗಳು ಮಾರಣಾಂತಿಅಕವಾಗಿ ಹಲ್ಲೆ ನಡೆಸಿದ್ದು, ಬಟ್ಟೆ ಹರಿದು ಮುಖ, ಮೂಗಿಗೆ ಪಂಚ್ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಮಂಜುನಾಥ್ ಅವರ ಕತ್ತು ಹಿಸುಕಿ ಕೊಲೆ ಯತ್ನ ನಡೆಸಿದ್ದಾರೆ. ಘಟನೆಯ ಬಳಿಕ ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಾರ್ಡರ್ ಅವರನ್ನು ರಕ್ಷಿಸಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕೈದಿಗಳಿಂದ ಈ ಕೃತ್ಯ ನಡೆದಿದ್ದು, ಪ್ರಕರಣದ ಬೆನ್ನಲ್ಲೇ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಆಗಸ್ಟ್ 22 ರಂದು ಪರಪ್ಪನ ಅಗ್ರಹಾರದ ಅನೆಕ್ಸ್-1 ಕಟ್ಟಡಕ್ಕೆ ವರ್ಗಾಯಿಸಲಾಗಿತ್ತು. ಆ ವೇಳೆ ಆರೋಪಿಗಳು ತಮ್ಮೊಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವಸ್ತುಗಳನ್ನು ಜೈಲಿನೊಳಗೆ ತೆಗೆದುಕೊಂಡು ಹೋಗಲು ಯತ್ನಿಸಿದ್ದರು. ಆದರೆ ಜೈಲು ವಾರ್ಡರ್ ಮಂಜುನಾಥ್ ಅವರು ಕಾನೂನಿನಂತೆ ಆ ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದೆ ತಡೆದಿದ್ದರು. ಇದೇ ವಿಷಯವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು ಮಂಜುನಾಥ್ ವಿರುದ್ಧ ವೈಷಮ್ಯ ಬೆಳೆಸಿಕೊಂಡಿದ್ದರು.

ಸೆಪ್ಟೆಂಬರ್ 2 ರಂದು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ಹಾಜರಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ವಾರ್ಡರ್ ಮಂಜುನಾಥ್ ಅವರು ಅನೆಕ್ಸ್-1 ಕಟ್ಟಡಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಆರೋಪಿ ಮೊಹಮ್ಮದ್ ಮುಜಾಮಿಲ್ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ವಾರ್ಡರ್ ಜೊತೆ ವಾಗ್ವಾದ ನಡೆಸಿದ್ದಾನೆ. ಹಠಾತ್ತನೆ ಮಂಜುನಾಥ್ ಅವರ ಮುಖ ಹಾಗೂ ಮೂಗಿಗೆ ಮುಷ್ಠಿಯಿಂದ ಬಲವಾಗಿ ಗುದ್ದಿ ರಕ್ತ ಬರುವಂತೆ ಗಾಯಗೊಳಿಸಿದ್ದಾನೆ. ತಕ್ಷಣವೇ ಆತನ ಸಹಚರರು ಕೈಜೋಡಿಸಿ, ಮಂಜುನಾಥ್ ಅವರನ್ನು ಕೊಠಡಿ ಸಂಖ್ಯೆ 4 ಕ್ಕೆ ಎಳೆದುಕೊಂಡು ಹೋಗಿ ಮನಸೋಇಚ್ಛೆ ಥಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಗನ್ (ಶಫ್ವಾನ್), ಮೊಹಮ್ಮದ್ ರಿಜ್ವಾನ್, ನಿಯಾಜ್ (ನಯಾಜ್), ಕಲಂದರ್ ಶಫಿ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular