HomeKarnatakaBREAKING : ಗಣೇಶ ಚತುರ್ಥಿ ಪ್ರಯುಕ್ತ ಸೆ.14ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

BREAKING : ಗಣೇಶ ಚತುರ್ಥಿ ಪ್ರಯುಕ್ತ ಸೆ.14ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಈ ನಿಷೇಧ ಜಾರಿಯಲ್ಲಿರಲಿದೆ.

ಗಣೇಶ ಚತುರ್ಥಿ ಆಚರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸೆ.14ರಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡದಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.

ನಿಷೇಧದ ಅವಧಿಯಲ್ಲಿ ಮಾಂಸದ ಅಂಗಡಿಗಳು ಹಾಗೂ ಸಂಬಂಧಿತ ವ್ಯಾಪಾರಿಗಳು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಗರದಾದ್ಯಂತ ಹಬ್ಬದ ಸಿದ್ಧತೆಗಳು ನಡೆಯುತ್ತಿದ್ದು, ಸಾರ್ವಜನಿಕರು ಸರ್ಕಾರ ಹಾಗೂ ಸ್ಥಳೀಯ ಆಡಳಿತದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ಸುರಕ್ಷಿತ ಹಾಗೂ ಶಾಂತಿಯುತ ವಿಸರ್ಜನೆಗಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಉಲ್ಸೂರು ಕೆರೆಯ ಕಲ್ಯಾಣಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಈ ದಿನಗಳಲ್ಲಿ ಗಣೇಶ ವಿಸರ್ಜನೆಗೆ ಅವಕಾಶ

2026ರ ಸೆಪ್ಟೆಂಬರ್ ತಿಂಗಳಲ್ಲಿ ಸೆ.14, 16, 18, 20, 22, 24, 26, 27 ಹಾಗೂ 28ರಂದು ಉಲ್ಸೂರು ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದೆ.

ಇನ್ನು ಸೆ.15, 17, 19, 21, 23 ಹಾಗೂ 25ರಂದು ಗಣೇಶ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ಈ ದಿನಗಳನ್ನು ಕೆರೆಯ ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯಗಳಿಗೆ ಮೀಸಲಿಡಲಾಗಿದೆ.

ಪಿಒಪಿ ಗಣೇಶ ಮೂರ್ತಿಗಳಿಗೆ ಸಂಪೂರ್ಣ ನಿಷೇಧ

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ, ವಿಸರ್ಜನೆ ಮಾಡುವಂತೆ ಮನವಿ ಮಾಡಲಾಗಿದೆ.

ಸುರಕ್ಷತೆಗೆ ಹಲವು ವ್ಯವಸ್ಥೆ

ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಅನುಕೂಲಕ್ಕಾಗಿ ಉಲ್ಸೂರು ಕೆರೆಯಲ್ಲಿ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.

  • ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ

  • 24 ಗಂಟೆಯ ಕ್ರೇನ್ ಸೇವೆ

  • ಆಂಬ್ಯುಲೆನ್ಸ್ ವ್ಯವಸ್ಥೆ

  • ಕೆರೆಯ ಸುತ್ತಮುತ್ತ ಸೂಕ್ತ ಬೆಳಕಿನ ವ್ಯವಸ್ಥೆ

  • ಮರದ ಕೊಂಬೆಗಳ ತೆರವು

  • ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ್

  • ಸಂಚಾರ ನಿಯಂತ್ರಣಕ್ಕೆ ಅಗತ್ಯ ಕ್ರಮ

  • ಮೊಬೈಲ್ ಶೌಚಾಲಯಗಳ ವ್ಯವಸ್ಥೆ

  • ಕುಡಿಯುವ ನೀರಿನ ಸೌಲಭ್ಯ

ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಿ, ಸುರಕ್ಷಿತ, ಶಾಂತಿಯುತ ಹಾಗೂ ಪರಿಸರ ಸ್ನೇಹಿ ಗಣೇಶ ವಿಸರ್ಜನೆಗೆ ಕೈಜೋಡಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಜಿ. ಮನವಿ ಮಾಡಿದ್ದಾರೆ.

 ದಾವಣಗೆರೆಯಲ್ಲೂ  ಪ್ರಾಣಿ ವಧೆ, ಪ್ರಾಣಿ ಮಾಂಸ ಮಾರಾಟ ನಿಷೇಧ

ದಾವಣಗೆರೆ :  ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

 ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಆಚರಣೆ

  ಸೆ.14 ರಂದು ಆಚರಿಸಲಿರುವ ಗಣೇಶ ಚತುರ್ಥಿ ಹಬ್ಬವನ್ನ ಜಲಮೂಲಗಳನ್ನು ಮಲಿನಗೊಳಿಸದೇ, ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಹಾನಗರಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

 ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಲ್ಪಟ್ಟ ಮತ್ತು ರಾಸಾಯನಿಕ ಬಣ್ಣಲೇಪಿತ ವಿಗ್ರಹಗಳನ್ನು ಪೂಜಿಸಿ ಜಲ ಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ ಜಲಚರಗಳಿಗೆ ಪ್ರಾಣಹಾನಿಯುಂಟು ಮಾಡುವುದಲ್ಲದೇ ನಮ್ಮ ಭವಿಷ್ಯದ ಪೀಳಿಗೆಗೆ ನಾವೇ ಕಲುಷಿತ ಪರಿಸರ ನೀಡಿದಂತಾಗುತ್ತದೆ. ಆದ್ದರಿಂದ ವಿಘ್ನನಿವಾರಕನೆಂದು ಸಮುದಾಯಗಳ ಐಕ್ಯತೆ ಸಂಕೇತವಾಗಿ ಪೂಜಿಸಲ್ಪಡುವ ಗಣೇಶನ ಹಬ್ಬವನ್ನು ನಮ್ಮೆಲ್ಲರ ಹಾಗೂ ವಿವಿಧ ಜೀವರಾಶಿಗಳ ಆರೋಗ್ಯಕ್ಕೆ ಪೂರಕವಾಗಿ ಪರಿಸರ ಸ್ನೇಹಿಯಾಗಿ ಆಚರಿಸುವ ಸಲುವಾಗಿ ಜೇಡಿ ಮಣ್ಣು , ಅರಿಶಿನ, ಬೆಲ್ಲ ಹಾಗೂ ಇತರೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿ ಬಣ್ಣರಹಿತ, ನೈಸರ್ಗಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಮಾತ್ರವೇ ಉಪಯೋಗಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಸಿದ್ಧಪಡಿಸಿದ ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ತಯಾರಿಸುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಿಒಪಿ, ರಾಸಾಯನಿಕ ಬಣ್ಣಲೇಪಿತ ವಿಗ್ರಹಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ರೂ. 10,000/- ಗಳ ದಂಡ ವಿಧಿಸಿ ಕಾನೂನು ರೀತ್ಯಾ ಕ್ರಮವಹಿಸಲಾಗುವುದು. ಪ್ರಯುಕ್ತ, ಪರಿಸರ ಸ್ನೇಹಿ ಗಣೇಶ ಆಚರಣೆಯಲ್ಲಿ ಎಲ್ಲಾ ಸಾರ್ವಜನಿಕರು, ಗಣೇಶ ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ತಿಳಿಸಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular