ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವು: ಕಟ್ಟಡ ಮಾಲೀಕ, ಇಂಜಿನಿಯರ್, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಕುಸಿದು ಬಾಲಕಿ ಮೃತಪಟ್ಟಿದ್ದು, ಮೃತ ತೇಜಸ್ವಿನಿ ತಂದೆ ಸುಧಾಕರ್ ರಾವ್ ಕೆಆರ್ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪುತ್ರಿಯ ಸಾವಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿತನವೇ ಕಾರಣವೆಂದು ಕಟ್ಟಡದ ಮಾಲೀಕ, ಗುತ್ತಿಗೆದಾರ, ಸೈಟ್ ಇಂಜಿನಿಯರ್, ಸಂಬಂಧಿಸಿದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸುಧಾಕರ್ ದೂರು ನೀಡಿದ್ದಾರೆ.

ಶಾಲಾ ವಾರ್ಷಿಕೋತ್ಸವ ಮುಗಿಸಿ ತೇಜಸ್ವಿನಿ ಮನೆಗೆ ಹೋಗುವಾಗ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಕುಸಿದು ಘಟನೆ ನಡೆದಿತ್ತು. ನಿಮ್ಹಾನ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಳು. ಸುರಕ್ಷಿತ ಕ್ರಮ ಕೈಗೊಳ್ಳದೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದರಿಂದ ಅವಘಡ ಸಂಭವಿಸಿದೆ ಎಂದು ಸುಧಾಕರ್ ರಾವ್ ನೀಡಿದ ದೂರಿನ ಮೇರೆಗೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆ ಶವಗಾರದಲ್ಲಿ ತೇಜಸ್ವಿನಿ ಮೃತದೇಹ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read