HomeKarnatakaBREAKING NEWS: ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ...

BREAKING NEWS: ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟ ಆರೋಪಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೆಹಲಿಯ ಶ್ರದ್ಧಾ ವಾಕರ್ ಮಾದರಿಯಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ಮೃತದೇಹವನ್ನು ಪೀಸ್ ಪೀಸ್ ಮಾಡಿ ಪ್ರಿಜ್ ನಲ್ಲಿ ಇಟ್ಟು ಎಸ್ಕೇಪ್ ಆಗಿರುವ ಘಟನೆ ವಯ್ಯಾಲಿ ಕಾವಲ್ ನಲ್ಲಿ ನಡೆದಿದೆ.

10ರಿಂದ 15 ದಿನಗಳ ಹಿಂದೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ರಿಜ್ ನಲ್ಲಿ ಇಡಲಾಗಿದ್ದು, ಅಕ್ಕಪಕ್ಕದವರ ಮಾಹಿತಿ ಮೇರೆಗೆ ವಯ್ಯಾಲಿ ಕಾವಲ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು 25ರಿಂದ 26 ವರ್ಷದ ಯುವತಿ ಕೊಲೆಯಾಗಿದ್ದು, ಪ್ರೀತಿ-ಪ್ರೇಮದ ವಿಚಾರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿಲ್ಲ. ಆರೋಪಿಗಾಗಿ ಪೊಲೀಸರು ಶೋಧನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular